ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Byrati Suresh: ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಸಾರಿಗೆ ಸಚಿವ ಬೈರತಿ ಸುರೇಶ್

ನಿರಂತರ ವೆಚ್ಚದ ಹೆಚ್ಚಳದಿಂದ ಸಂಸ್ಥೆಗಳಿಗೆ ನಷ್ಟವಾಗುತ್ತಿದ್ದು, ಅನಿವಾರ್ಯವಾಗಿ ಟಿಕೆಟ್ ದರ ಪರಿಷ್ಕರಣೆಗೆ ಮುಂದಾಗಬೇಕಾಗಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವ ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರ ಟಿಕೆಟ್ ಮೊತ್ತದ ಶೇ 100ರಷ್ಟು ಹಣವನ್ನು ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಕಾಲಕಾಲಕ್ಕೆ ಮರುಪಾವತಿಸುತ್ತಿದೆ.

ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ

-

Profile
Ashok Nayak Nov 2, 2026 10:44 PM

ಬೆಂಗಳೂರು: ಹಿರಿಯ ಅಧಿಕಾರಿಗಳು ಹಾಗೂ ನಾಲ್ಕು ಸಾರಿಗೆ ಸಂಸ್ಥೆಗಳ ಮುಖ್ಯಸ್ಥರ ಸಭೆಯನ್ನು ಕರೆಯಲಾಗಿದೆ. ಎಷ್ಟು ಪ್ರಮಾಣದಲ್ಲಿ ದರ ಹೆಚ್ಚಳ ಮಾಡಬೇಕು ಎಂಬುದನ್ನು ನ.4ರಂದು ನಿರ್ಧರಿಸಲಾಗುವುದು. ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ(Bus Fare Hike) ಅನಿವಾರ್ಯ ಎಂದು ಸಾರಿಗೆ ಸಚಿವ ಬೈರತಿ ಸುರೇಶ್(Byrati Suresh) ಹೇಳಿದರು.

ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಮಾತನಾಡಿದ ಸಚಿವರು, ಸಭೆಯಲ್ಲಿ ಚರ್ಚಿಸಿದ ಬಳಿಕ ಟಿಕೆಟ್ ದರ ಏರಿಕೆಯ ಪ್ರಮಾಣವನ್ನು ನ.4ರಂದು ಅಧಿಕೃತವಾಗಿ ಪ್ರಕಟಿಸಲಾಗುವುದು. ಕಳೆದ 11 ವರ್ಷಗಳಲ್ಲಿ ರಾಜ್ಯದಲ್ಲಿ ಸಾರಿಗೆ ಬಸ್‌ಗಳ ಟಿಕೆಟ್ ದರವನ್ನು ಒಂದೇ ಬಾರಿ ಮಾತ್ರ ಹೆಚ್ಚಿಸಲಾಗಿದೆ. ಈ ಅವಧಿಯಲ್ಲಿ ಡೀಸೆಲ್ ಬೆಲೆ, ವಾಹನಗಳ ನಿರ್ವಹಣೆ ಸೇರಿದಂತೆ ದಿನನಿತ್ಯದ ಕಾರ್ಯಾಚರಣೆ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಕಷ್ಟವಾಗುತ್ತಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಸಂಸ್ಥೆಗಳ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಹಕರಿಸಬೇಕು.

ಇದನ್ನೂ ಓದಿ: Minister Byrati Suresh: ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ಬೈರತಿ ಸುರೇಶ್ ದಿಢೀರ್ ಭೇಟಿ: ಸಾರಿಗೆ ಸಚಿವರಿಂದ ಬಸ್ ನಿಲ್ದಾಣಗಳ ನಿರ್ವಹಣೆ ಬಗ್ಗೆ ಮೆಚ್ಚುಗೆ

ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದೆ. ಇಂಧನ ಬೆಲೆ ಏರಿಕೆಯಿಂದ ಸಾರಿಗೆ ಸಂಸ್ಥೆಗಳ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಇಂಧನ ದರ ಏರಿಕೆಯಾದಾಗ ಯಾರೂ ಪ್ರಶ್ನಿಸುವುದಿಲ್ಲ.

ನಿರಂತರ ವೆಚ್ಚದ ಹೆಚ್ಚಳದಿಂದ ಸಂಸ್ಥೆಗಳಿಗೆ ನಷ್ಟವಾಗುತ್ತಿದ್ದು, ಅನಿವಾರ್ಯವಾಗಿ ಟಿಕೆಟ್ ದರ ಪರಿಷ್ಕರಣೆಗೆ ಮುಂದಾಗಬೇಕಾಗಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವ ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರ ಟಿಕೆಟ್ ಮೊತ್ತದ ಶೇ 100ರಷ್ಟು ಹಣವನ್ನು ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಕಾಲಕಾಲಕ್ಕೆ ಮರುಪಾವತಿಸುತ್ತಿದೆ. ಹೀಗಾಗಿ ಶಕ್ತಿ ಯೋಜನೆಯಿಂದ ಸಂಸ್ಥೆಗಳಿಗೆ ಯಾವುದೇ ಆರ್ಥಿಕ ತೊಂದರೆಯಾಗಿಲ್ಲ.

ಟಿಕೆಟ್ ದರ ಪರಿಷ್ಕರಣೆಗೆ ರಚಿಸಿದ್ದ ಸಮಿತಿಯು ಹೆಚ್ಚಿನ ಪ್ರಮಾಣದಲ್ಲಿ ದರ ಹೆಚ್ಚಳಕ್ಕೆ ಶಿಫಾರಸು ಮಾಡಿದೆ. ಸಮಿತಿ ಸೂಚಿಸಿದಷ್ಟು ದರ ಏರಿಸಿದರೆ ಸಾರ್ವಜನಿಕರಿಗೆ ಹೊರೆಯಾಗಲಿದೆ. ನೆರೆರಾಜ್ಯ ಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಈಗಲೂ ಕಡಿಮೆ ಇದೆ. ಪ್ರಯಾಣಿಕರಿಗೆ ಹೊರೆಯಾಗದಂತೆ ಹಂತ ಹಂತವಾಗಿ ದರ ಹೆಚ್ಚಳ ಮಾಡಲು ಉದ್ದೇಶಿಸಲಾಗಿದೆ ಎಂದರು.