ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ (Karnataka bypolls) ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ಈ ಎರಡು ಕ್ಷೇತ್ರಗಳ ಸರ್ಕಾರಿ ನೌಕರರಿಗೆ ಮತದಾನ ಮಾಡಲು ಅನುಕೂಲವಾಗಲು ರಜೆ ಘೋಷಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 9ರ ಗುರುವಾರದಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳ ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರ ಔದ್ಯಮಿಕ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಲಾಗಿದೆ.
ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬಿದ್ದಿದ್ದು, ಗುರುವಾರ (ಏ.9) ಮತದಾನ ನಡೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ರಾಜ್ಯ ಮಟ್ಟದ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡಿ ಬಿರುಸಿನ ಪ್ರಚಾರ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಯತ್ನ ಮಾಡಿದ್ದಾರೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಹಿನ್ನೆಲೆಯಲ್ಲಿ ನಾಳೆ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ.
ಉಪ ಚುನಾವಣೆ; 2 ಕ್ಷೇತ್ರ ಕೈಜಾರುವ ಭೀತಿಯಿಂದ ಸಿಎಂಗೆ ನಿದ್ರೆ ಬರುತ್ತಿಲ್ಲ ಎಂದ ವಿಜಯೇಂದ್ರ
ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉಮೇಶ್ ಮೇಟಿ ಪರವಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವೀರಣ್ಣ ಚರಂತಿಮಠ ಪರವಾಗಿ, ದಾವಣಗೆರೆ ದಕ್ಷಿಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್ ಸಮರ್ಥ್ ಪರವಾಗಿ ಹಾಗೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರ ಪರ ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಸೇರಿ ಅನೇಕರು ಪ್ರಚಾರ ನಡೆಸಿದ್ದಾರೆ. ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿರುವ ಕಾರಣ ನಾಳೆ ಮಾತ್ರ ಅಭ್ಯರ್ಥಿ ಸೇರಿದಂತೆ 5 ಮಂದಿ ಮಾತ್ರ ಮನೆ ಮನೆಗೆ ತೆರಳಿ ಮಾತ ಯಾಚಿಸಲಿದ್ದಾರೆ.