ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ (Mahesh Shetty Thimarodi) ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೂಚಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತಿಮರೋಡಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವರು ನೀಡಿರುವ ಸೂಚನೆಯ ಮೇರೆಗೆ, ಪೊಲೀಸರು ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರ ಸೂಚನೆ ಹೊರಬೀಳುತ್ತಿದ್ದಂತೆಯೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ತಿಮರೋಡಿ ವಿರುದ್ಧದ ಹಳೆಯ ಪ್ರಕರಣಗಳನ್ನು ಕೆದಕುತ್ತಿದ್ದಾರೆ. ಅವರ ಹಿಂದಿನ ಹೇಳಿಕೆಗಳು ಮತ್ತು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಕಾನೂನು ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆ ಪರಿಶೀಲಿಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | ಧರ್ಮಸ್ಥಳ: ನ್ಯಾಯ ಒದಗಿಸುವ ಸೌಜನ್ಯ ಜನಪ್ರತಿನಿಧಿಗಳಿಗಿಲ್ಲವೇ ?