ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಧಮ್ಕಿ ರಾಜೀವ್‌ ಗೌಡಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟವರು ಯಾರು?; ಸಿಕ್ಕಿಬಿದ್ದಿದ್ದು ಹೇಗೆ?

ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಆರೋಪಿ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 13 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸಲಾಗಿದೆ.

ಶಿಡ್ಲಘಟ್ಟದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ.

ಬೆಂಗಳೂರು, ಜ.26: ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಳೆದ 13 ದಿನಗಳಿಂದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ರಾಜೀವ್‌ ಗೌಡ ಹೇಗೆ ಸಿಕ್ಕಿಬಿದ್ದ ಎಂಬ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಹೌದು, ಇಷ್ಟು ದಿನ ಈತ ತಲೆಮರೆಸಿಕೊಳ್ಳಲು ಮಂಗಳೂರಿನ ಬಹುಕೋಟಿ ಒಡೆಯರೊಬ್ಬರು ಆಶ್ರಯ ನೀಡಿದ್ದರು ಎಂದು ತಿಳಿದುಬಂದಿದೆ.

ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಆರೋಪಿ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಲಾಗಿದೆ. ಕಳೆದ 13 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡನಿಗೆ ಇಷ್ಟು ದಿನ ಮಂಗಳೂರಿನ ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನಲಾಗಿದೆ. ಹೌದು, ಆಶ್ರಯ ನೀಡಿದ್ದ ಉದ್ಯಮಿಯ ಕಾರಿನ ಮೂಲಕವೇ ಇಂದು ಮಂಗಳೂರಿನಿಂದ ಕೇರಳಕ್ಕೆ ಪರಾರಿಯಾಗುತ್ತಿರುವ ವೇಳೆ ರಾಜೀವ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್‌ ಮುಖಂಡ ಸಿಕ್ಕಿಬಿದ್ದಿದ್ಹೇಗೆ?

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದರಿಂದ ಜನವರಿ 14ರಂದು ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟದಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಶಿಡ್ಲಘಟ್ಟ ಬಿಟ್ಟು ಈತ ಪರಾರಿಯಾಗಿದ್ದ. ಇದರ ಬೆನ್ನಲ್ಲೇ ಜನವರಿ 24ರಂದು ರಾಜೀವ್​ನನ್ನು ಕೆಪಿಸಿಸಿ ಶಿಸ್ತುಸಮಿತಿ ಪಕ್ಷದಿಂದ ಅಮಾನತು ಮಾಡಿತ್ತು. ಜತೆಗೆ ಎಫ್‌ಐಆರ್‌ ರದ್ದುಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿತ್ತು. ಹೀಗಾಗಿ ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ. ಪೊಲೀಸರ ಕಣ್ತಪ್ಪಿಸಲು ಮಂಗಳೂರು ರೈಲ್ವೆ ಸ್ಟೇಷನ್​​​ನಲ್ಲಿ ಕಾರು ನಿಲ್ಲಿಸಿ ಕಳ್ಳಾಟ ಆಡಿದ್ದ. ಆದರೆ ಉದ್ಯಮಿ ಕಾರಿನಲ್ಲೇ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜೀವ್‌ ಗೌಡ, ಮಂಗಳೂರಿನ ಉದ್ಯಮಿಯ ಆಶ್ರಯದಲ್ಲಿದ್ದಾನೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿಯುತ್ತಿದ್ದಂತೆಯೇ ಬಂಧನಕ್ಕೆ ಬಲೆ ಬೀಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರ ದಿಕ್ಕು ತಪ್ಪಿಸಲು ಆರೋಪಿ ರಾಜೀವ್ ಗೌಡ, ತನ್ನ ಕಾರು ಮಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ್ದ. ಬಳಿಕ ಆಶ್ರಯ ಕೊಟ್ಟಿದ್ದ ಉದ್ಯಮಿಯ ಕಾರಿನಲ್ಲಿ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ಹೋಗಿದ್ದ. ಉದ್ಯಮಿಯ ಕಾರು ಯಾವ ಕಡೆ ಹೋಗಿದೆ ಎನ್ನುವುದನ್ನು ಕಾರ್ಯಚರಣೆ ನಡೆಸಿದ್ದು, ಆಗ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಬಳಿಕ ಅದೇ ಮಾರ್ಗದಲ್ಲಿ ಕಾಡಿನ ಜಾಡು ಹಿಡಿದು ಹೊರಟ ಶಿಡ್ಲಘಟ್ಟ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡಕ್ಕೆ ಕೇರಳ ಗಡಿ ಭಾಗದಲ್ಲಿ ಆರೋಪಿ ರಾಜೀವ್ ಗೌಡ ಸಿಕ್ಕಿಬಿದ್ದಿದ್ದಾನೆ.

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ; ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

ಸದ್ಯ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡ, ಕೇರಳದ ಗಡಿಭಾಗದಿಂದ ರಾಜೀವ್‌ಗೌಡನನ್ನು ಶಿಡ್ಲಘಟ್ಟ ನಗರ ಠಾಣೆಗೆ ಕರೆತರುತ್ತಿದ್ದು, ಬಳಿಕ ಚಿಂತಾಮಣಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.