ಬೆಂಗಳೂರು: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶ್ರೀ ಹಾಸನಾಂಬೆ (Hasanamba Devi) ದೇವಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದಾರೆ. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಮಿತಿ ಮೀರಿದೆ. ಹೀಗಾಗಿ ಬೆಂಗಳೂರು- ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಟಿಕೆಟ್ ಬುಕಿಂಗ್ (KSRTC Bus Ticket Booking) ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹಾಸನಾಂಬೆ ದೇಗುಲ ಹಾಗೂ ಸುತ್ತ ಮುತ್ತ ಬಾರಿ ಜನಸ್ತೋಮ ನೆರೆದಿದೆ. ಭಕ್ತರು ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇತ್ತ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭಕ್ತರನ್ನು ನಿಯಂತ್ರಸಲು ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ಸಹಸ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯಲು 50 ಸಾವಿರ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ. ಹೀಗಾಗಿ, ತಾತ್ಕಾಲಿಕವಾಗಿ ಟಿಕೆಟ್ ಬುಕಿಂಗ್ ಕೂಡ ಸ್ಥಗಿತಗೊಳಿಸಲಾಗಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತರ ಸಾಗರ ಹೆಚ್ಚಾಗಿರುವ ಕಾರಣ ದರ್ಶನಕ್ಕೆ ಕಿಲೋಮೀಟರ್‌ಗಟ್ಟಲೇ ಸಾಲು ದೊಡ್ಡದಾಗಿದೆ. 1,000 ರೂ. ಹಾಗೂ 300 ರೂ. ಟಿಕೆಟ್ ಪಡೆದ ಭಕ್ತರು ಪ್ರತ್ಯೇಕ ಸಾಲುಗಳಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ಎರಡೂ ಸಾಲುಗಳು ಕಿಲೋಮೀಟರ್‌ಗೂ ಅಧಿಕ ಉದ್ದವಾಗಿವೆ.
ಇದನ್ನೂ ಓದಿ: Laxmi Hebbalkar: ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳ್ಕರ್