ಬೆಂಗಳೂರಿನ ಹೊರವಲಯದಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ! 225 ಜಿಲೆಟಿನ್ ವಶಕ್ಕೆ
ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಸಂಗ್ರಹ ಚಿತ್ರ -
ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಒಟ್ಟು 50 ಡಿಟೋನೇಟರ್ ಕಡ್ಡಿಗಳು ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿದ್ದೇಕೆ ಎಂಬ ಬಗ್ಗೆ ಅವಲಹಳ್ಳಿ ಠಾಣೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.
ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿತ್ತು ಜೆಲೆಟಿನ್
ಪ್ರಧಾನಿ ಮೋದಿಯವರು ಮೇ 10ರಂದು ಬೆಂಗಳೂರಿಗೆ ಆಗಮಿಸಿದ್ದಾಗ, ಅವರು ಸಾಗುವ ಮಾರ್ಗದಲ್ಲಿ ಜಿಲೆಟಿನ್ ಬಾಕ್ಸ್ ಪತ್ತೆಯಾಗಿತ್ತು. ಈ ಸ್ಫೋಟಕ ವಸ್ತುಗಳು ಪತ್ತೆಯಾದ ಕೇಸ್ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆಯಾಗಿದ್ದು, ಕರ್ತವ್ಯ ಲೋಪದಡಿ ಬೆಂಗಳೂರಿಗೆ ಆರು ಮಂದಿ ಪೊಲೀಸರನ್ನ ಅಮಾನತು ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಮೇ 10ರಂದು ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರು ಸಾಗುವ ಮಾರ್ಗದ ಪಕ್ಕದಲ್ಲಿಯೇ ಜೆಲೆಟಿನ್ ಸ್ಫೋಟಕಗಳು ಪತ್ತೆಯಾಗಿದ್ದವು.ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ ಒಬ್ಬನನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಆರ್ಟ್ ಆಫ್ ಲಿವಿಂಗ್‌ಗೆ ಬರೋದಕ್ಕೂ ಮುನ್ನ, ರಸ್ತೆಯುದ್ದಕ್ಕೂ ನಡೆಸಲಾಗಿದ್ದ ಭದ್ರತಾ ತಪಾಸಣೆಯಲ್ಲಿ ಜೆಲೆಟಿನ್‌ಗಳು ಪತ್ತೆಯಾಗಿದ್ದವು. ಪ್ರಧಾನಿ ಮೋದಿ ಆಗಮಿಸಬೇಕಿದ್ದ ಮುಖ್ಯಸ್ಥಳದಿಂದ 3 ಕಿಮೀ ದೂರದಲ್ಲಿ, ಫೂಟ್‌ಪಾತ್ ಬದಿಯಲ್ಲಿ ಎರಡು ಕಡ್ಡಿಗಳು ಸಿಕ್ಕಿದ್ದವು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು DIG ತಿಳಿಸಿದ್ದಾರೆ.