ಬೆಂಗಳೂರಲ್ಲಿ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಪತಿ!
ಪತ್ನಿ ಮೇಲೆ ಆ್ಯಸಿಡ್ ಎರಚಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಜೆಪಿ ನಗರದ ನಾರಾಯಣ ಕ್ಲೀನಿಕ್ ಬಳಿ ನಡೆದಿದೆ. 26 ವರ್ಷದ ಮಧುಮಿತ ಹಲ್ಲೆಗೊಳಗಾದ ಮಹಿಳೆ. ಮಧುಮಿತ ಮೂಲತಃ ಕೊಲ್ಕತ್ತಾ ಮೂಲದವಳಾಗಿದ್ದು, ಕಳೆದ ಒಂದೂವರೆ ವರ್ಷದಿಂದ ನಾರಾಯಣ ಕ್ಲೀನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಪತ್ನಿ ಮೇಲೆ ಆ್ಯಸಿಡ್ ಎರಚಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಜೆಪಿ ನಗರದ (Bengaluru) ನಾರಾಯಣ ಕ್ಲೀನಿಕ್ ಬಳಿ ನಡೆದಿದೆ. 26 ವರ್ಷದ ಮಧುಮಿತ ಹಲ್ಲೆಗೊಳಗಾದ ಮಹಿಳೆ. ಮಧುಮಿತ ಮೂಲತಃ ಕೊಲ್ಕತ್ತಾ ಮೂಲದವಳಾಗಿದ್ದು, ಕಳೆದ ಒಂದೂವರೆ ವರ್ಷದಿಂದ ನಾರಾಯಣ ಕ್ಲೀನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು (Crime News) ಎಂದು ತಿಳಿದು ಬಂದಿದೆ. ಆರೋಪಿತ ಪತಿಯನ್ನು ವೆಂಕಟೇಶ್ ಎಂದು ತಿಳಿದು ಬಂದಿದೆ.
ಬೆಳಿಗ್ಗೆ 9:15ರ ಸುಮಾರಿಗೆ ಮಧುಮಿತ ತಿಂಡಿ ತಿನ್ನಲು ಹೊರಗೆ ಹೋಗಿದ್ದ ವೇಳೆ ಪತಿ ವೆಂಕಟೇಶ್ ಬೈಕ್‌ನಲ್ಲಿ ಬಂದು ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ. ಆ್ಯಸಿಡ್ ಎರಚಿ ಬಳಿಕ ಮಚ್ಚಿನಿಂದ ಮನಸೋಇಚ್ಛೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಗಂಭೀರವಾಗಿ ಗಾಯಗೊಂಡ ಮಧುಮಿತಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಧುಮಿತ ಆಸ್ಪತ್ರೆಯ ಪಾರ್ಕಿಂಗ್ ಜಾಗದ ಬಳಿ ಕೂಗಾಡಿಕೊಂಡು ಬಂದಿದ್ದಾಳೆ. ಈ ವೇಳೆ ವೆಂಕಟೇಶ್ ಮಚ್ಚಿನಿಂದ ಹಲ್ಲೆ ನಡೆಸಿ ಆ್ಯಸಿಡ್ ಎರಚಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.
ಹಲ್ಲೆ ನಡೆಯುತ್ತಿದ್ದ ವೇಳೆ ಸ್ಥಳೀಯರು ಮಧುಮಿತಳ ರಕ್ಷಣೆಗೆ ಮುಂದಾಗಿದ್ದಾರೆ. ಕೆಲವರು ಕಲ್ಲಿನಿಂದ ಹೊಡೆದು ಆರೋಪಿಯನ್ನು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ರಕ್ಷಣೆಗೆ ಬಂದವರ ಮೇಲೂ ಆರೋಪಿ ಹಲ್ಲೆಗೆ ಮುಂದಾಗಿದ್ದ ಎನ್ನಲಾಗಿದೆ. ಸಂಚಾರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಜೆಪಿ ನಗರ ಪೊಲೀಸರು ವೆಂಕಟೇಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಧುಮಿತ ಅವರಿಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜೆಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರತ್ಯೇಕ ಘಟನೆಯಲ್ಲಿ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಪತಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಗಾಯಾಳು ಪತ್ನಿ ಸುಚಿತ್ರಾ ಪಿ.ಜೆ. (38) ನೀಡಿದ ದೂರಿನ ಮೇರೆಗೆ, ಆರೋಪಿ ಪತಿ ಚಿದಾನಂದ ಕೆ. ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 6ರಂದು ಬೆಳಗ್ಗೆ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆರೋಪಿ ಚಿದಾನಂದ, ಪತ್ನಿ ಸುಚಿತ್ರಾ ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ತೀವ್ರತೆಗೆ ಸುಚಿತ್ರಾ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ನೆರೆಹೊರೆಯವರು ಧಾವಿಸಿ ಬಂದು ಅವರನ್ನು ಉಪಚರಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲೇ ಮಾವನ ಭೀಕರ ಕೊಲೆ; ಪಾರ್ಟಿ ಮೂಡ್‌ನಲ್ಲಿ ಸೊಸೆ, 6 ಲಕ್ಷ ಸುಪಾರಿ ಕೊಟ್ಟವಳು ಸಿಕ್ಕಿ ಬಿದ್ದಿದ್ದೇಗೆ?
ಪತ್ನಿ ಮೇಲೆ ಹಲ್ಲೆ ನಡೆಸಿದ ಬಳಿಕ ಆರೋಪಿ ಚಿದಾನಂದ ಸಹ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಸುಚಿತ್ರಾ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆರೋಪಿ ಚಿದಾನಂದ ವಿರುದ್ಧ ದೂರು ದಾಖಲಾಗಿದೆ.