ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಂದು ಪತಿಯೂ ಆತ್ಮಹತ್ಯೆ!

Bengaluru News: ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ಘಟನೆ ನಡೆದಿದೆ. ಪತ್ನಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಅದೇ ವಿಚಾರಕ್ಕೆ ನಿನ್ನೆ ತಡರಾತ್ರಿ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯನ್ನು ಪತಿ ಕೊಂದಿದ್ದಾನೆ. ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯ ಕೊಂದು ಪತಿಯೂ ಆತ್ಮಹತ್ಯೆ!

-

Prabhakara R
Prabhakara R Sep 9, 2026 3:47 PM

ಬೆಂಗಳೂರು: ರೀಲ್ಸ್‌ ನೋಡುವ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ನಡೆದಿದೆ. ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ನಿನ್ನೆ ದಂಪತಿ ಇಬ್ಬರೇ ಮನೆಯಲ್ಲಿ ಇದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಘವೇಂದ್ರ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶೃತಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ನಿನ್ನೆ ತಡರಾತ್ರಿಯವರೆಗೂ ಶೃತಿ ರೀಲ್ಸ್ ನೋಡುತ್ತಿದ್ದ ವೇಳೆ ಮತ್ತೆ ಗಲಾಟೆ ನಡೆದಿದ್ದು, ಈ ವೇಳೆ ಕೃತ್ಯ ನಡೆದಿದೆ. ಘಟನೆ ನಿನ್ನೆ ರಾತ್ರಿ ನಡೆದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಎಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.