ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Murder: ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯನ್ನು ಕೊಂದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟ ಪತಿ!

ಬೆಂಗಳೂರಿನ ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಘಟನೆ ನಡೆದಿದೆ. ಪತಿ-ಪತ್ನಿ ಜಗಳ ತಾರಕಕ್ಕೇರಿದಾಗ ಪತ್ನಿಯನ್ನು ಗಂಡ ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಮನೆಯೊಳಗೆ ಬಿಟ್ಟು ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾನೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪತ್ನಿಯನ್ನು ಕೊಂದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟ ಪತಿ!

-

Prabhakara R
Prabhakara R Jul 30, 2026 10:01 PM

ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಮನೆಗೆ ಬೀಗ ಹಾಕಿ ಪರಾರಿಯಾದ ಘಟನೆ (Bengaluru Murder) ಬೆಂಗಳೂರಿನ ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಬೆಳಕಿಗೆ ಬಂದಿದೆ. ಬಿಹಾರ ಮೂಲದ ರಿಯಾ ಕುಮಾರಿ ಮೃತ ಮಹಿಳೆ. ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ನಾಲ್ಕು ತಿಂಗಳ ಹಿಂದೆ ಈ ದಂಪತಿ ಬಿಹಾರದಿಂದ ಬೆಂಗಳೂರಿಗೆ ಬಂದು ಗೇರುಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ರಿಯಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಧೀರಜ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಆದರೆ, ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸ್ನೇಹಿತರು ಹಲವು ಬಾರಿ ಸಮಾಧಾನ ಮಾಡಿದರೂ ಪರಿಸ್ಥಿತಿ ಸುಧಾರಿಸಿರಲಿಲ್ಲ.

ಜಗಳ ತೀವ್ರಗೊಂಡ ವೇಳೆ ಧೀರಜ್ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಮನೆಯೊಳಗೆ ಬಿಟ್ಟು ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ರಿಯಾ ಸ್ನೇಹಿತೆ ಹಲವು ಬಾರಿ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದಾಳೆ. ಆಗ ಕಿಟಕಿ ಬಳಿ ನೊಣಗಳು ಕಂಡುಬಂದಿದ್ದು, ಮನೆಯಿಂದ ತೀವ್ರ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡು ಮನೆ ಮಾಲೀಕರಿಗೆ ವಿಷಯ ತಿಳಿಸಿದ್ದಾಳೆ. ಬಳಿಕ ಬಾಗಿಲು ತೆರೆದು ನೋಡಿದಾಗ ಬೆಡ್‌ಶೀಟ್‌ನಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಕುಂಬಳಗೋಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್‌.ಆರ್‌.ನಗರದ ಆಸ್ಪತ್ರೆಗೆ ರವಾನಿಸಲಾಗಿದೆ.

ವರ್ತೂರು ಕ್ರಿಕೆಟ್ ಗ್ರೌಂಡ್‌ನಲ್ಲಿ ರುಂಡ ಪತ್ತೆ ಕೇಸ್‌ಗೆ ಟ್ವಿಸ್ಟ್;‌ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು!

ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಧೀರಜ್ ಕುಮಾರ್‌ನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆತನ ಬಂಧನದ ಬಳಿಕ ಕೊಲೆಗೆ ನಿಖರ ಕಾರಣ ಏನು ಎಂಬುದು ಬೆಳಕಿಗೆ ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.