ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ ಹೈಡ್ರೋ ಗಾಂಜಾ, 1.75 ಕೋಟಿ ರೂ ಚಿನ್ನ ಜಪ್ತಿ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ  ಹೈಡ್ರೋ ಗಾಂಜಾ, ಚಿನ್ನ ಜಪ್ತಿ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 22, 2026 9:47 AM

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂ. (Bengaluru's Kempegowda Airport) ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಲ್ಲದೆ, ಪ್ರತ್ಯೇಕ ಪ್ರಕರಣಗಳಲ್ಲಿ 6 ಪ್ರಯಾಣಿಕರನ್ನು ಬಂಧಿಸಿದ್ದಾರೆ.

ಬ್ಯಾಂಕಾಕ್ ಮತ್ತು ಇತರ ವಿದೇಶಗಳಿಂದ ವಿಮಾನದ ಮೂಲಕ ಸಾಗಿಸುತ್ತಿದ್ದ ಸುಮಾರು 28 ರಿಂದ 29 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕರು ಸೇರಿದಂತೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಐದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ತ್ಯೇಕ ಕಾರ್ಯಾಚರಣೆಯಲ್ಲಿ, ಅಬುದಾಬಿ ಹಾಗೂ ಕೌಲಾಲಂಪುರದಿಂದ ಕೆಐಎಗೆ ಆಗಮಿಸಿದ್ದ ಪ್ರಯಾಣಿಕರಿಂದ 1.75 ಕೋಟಿ ರೂಪಾಯಿ ಮೌಲ್ಯದ 1.2 ಕೆಜಿ ಅಕ್ರಮ ಚಿನ್ನಾಭರಣಗಳನ್ನು ಸೀಜ್ ಮಾಡಲಾಗಿದೆ. ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರನ್ನು ಬಂಧಿಸಿ ಕಸ್ಟಮ್ಸ್ ತನಿಖೆ ಮುಂದುವರಿಸಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ

ಇದೇ ತಿಂಗಳ ಆರಂಭದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಪ್ರಜೆಯೊಬ್ಬನನ್ನು ಬಂಧಿಸಿ, ಅಂದಾಜು 5.25 ಕೋಟಿ ಮೌಲ್ಯದ 15 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿತ್ತು. ಸೂರಜ್ ಸೂರ್ಯವಂಶಿ ಎಂದು ಗುರುತಿಸಲಾದ ಆರೋಪಿಯನ್ನು, ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಟರ್ಮಿನಲ್‌-2ರಲ್ಲಿ (T2) ಏರ್ ಇಂಟೆಲಿಜೆನ್ಸ್ ಯುನಿಟ್‌ (AIU) ತಂಡ ತಡೆದು ತಪಾಸಣೆ ನಡೆಸಿತ್ತು. ತಪಾಸಣೆ ಹಾಗೂ ನಂತರದ ಪರಿಶೀಲನೆ ವೇಳೆ, ಆರೋಪಿಯ ಲಗೇಜ್‌ನಲ್ಲಿ ಅತ್ಯುನ್ನತ ಗುಣಮಟ್ಟದ ಮಾದಕವಸ್ತುವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿತ್ತು.