ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

"ನಾನು ಹಳ್ಳಿಯವನು ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ"; ಪ್ರಿಯಾಂಕ್‌ ಖರ್ಗೆಗೆ ಕುಮಾರಸ್ವಾಮಿ ತಿರುಗೇಟು

ಕುಮಾರಸ್ವಾಮಿ ಹಳ್ಳಿ ಗುಗ್ಗೂನಾ, ವಿಲೇಜ್ ಈಡಿಯಟ್ಸ್ ಥರ ಆಡೋದನ್ನು ಕೇಂದ್ರ ಸಚಿವರು ನಿಲ್ಲಿಸಬೇಕೆಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಹೆಚ್ ಡಿ ಕುಮಾರಸ್ವಾಮಿ ಇದೀಗ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಕುಮಾರಸ್ವಾಮಿ ಹಳ್ಳಿ ಗುಗ್ಗೂನಾ, ವಿಲೇಜ್ (HD Kumaraswamy) ಈಡಿಯಟ್ಸ್ ಥರ ಆಡೋದನ್ನು ಕೇಂದ್ರ ಸಚಿವರು ನಿಲ್ಲಿಸಬೇಕೆಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿಕೆಗೆ ಹೆಚ್ ಡಿ ಕುಮಾರಸ್ವಾಮಿ ಇದೀಗ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, , 'ಭಾರತದ ಆತ್ಮ ಹಳ್ಳಿಗಳಲ್ಲಿದೆ’ ಎಂಬ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆಗೆ ಟಾಂಗ್‌ ನೀಡಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ನಿಜ, ನಾನು ಹಳ್ಳಿಯವನು. ಅಲ್ಲೇ ಹುಟ್ಟಿ ಹಟ್ಟಿಯಲ್ಲಿ ಆಡಿ ಬೆಳೆದವನು. ಹಳ್ಳಿಯವನು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ" ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ, ಗ್ರಾಮೀಣ ಜನರ ಕುರಿತಾದ ಕೀಳರಿಮೆಯ ಧೋರಣೆಯನ್ನು ಖಂಡಿಸುವ ನಿಟ್ಟಿನಲ್ಲಿ ಅವರು #ಹಳ್ಳಿಗರೆಂದರೆಗುಗ್ಗುಗಳಲ್ಲ ಎಂಬ ಹ್ಯಾಶ್‌ಟ್ಯಾಗ್ ಬಳಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.



ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ ನನ್ನನ್ನು ಅವಮಾನ ಮಾಡಿದರೆ ಚಿಂತೆಯಿಲ್ಲ, ನೋವಿಲ್ಲ, ಆದರೆ ಅವರು ಹಳ್ಳಿಯವರ ಬಗ್ಗೆ, ರೈತರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ ಎಂದು ಕಿಡಿ ಕಾರಿದರು.

ಗೃಹ ಇಲಾಖೆಗೆ ಪ್ರಿಯಾಂಕ್ ಖರ್ಗೆ ಅಸಮರ್ಥ ಎಂಬ ಕುಮಾರಸ್ವಾಮಿ ಹೇಳಿಕೆಗೆ ವಾಗ್ದಾಳಿ ನಡೆಸಿದ್ದ ಪ್ರಿಯಾಂಕ್ ಖರ್ಗೆ, ಕುಮಾರಸ್ವಾಮಿ ಹಳ್ಳಿ ಗುಗ್ಗುನಾ, ನಾವೇನು ಬಿಗ್ ಬಾಸ್ ನಡೆಸ್ತಿದ್ದೀವಾ. ತನಿಖೆಯನ್ನು ಲೈವ್ ಸ್ಟ್ರೀಮ್ ಮಾಡೋಕಾಗುತ್ತಾ ಎಂದು ಪ್ರಶ್ನಿಸಿದ್ದರು. ಅಷ್ಟೇ ಅಲ್ಲದೇ ಜನರು ನಿಮಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ, ನಿಮ್ಮ ಪಾಲಿಟಿಕ್ಸ್ ಗೆ ಒಂದು ಬಾರಿಯೂ100 ಸೀಟು ತೆಗೆದುಕೊಂಡಿಲ್ಲ. ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವನಿಗೆ ಸಾಮಾನ್ಯ ಪ್ರಜ್ಞೆ ಇಲ್ಲವಾ..ಇದೇನು ಮಕ್ಕಳ ಆಟನಾ.. ಪ್ರತಿದಿನ ಚಿಕ್ಕಮಕ್ಕಳ ತರ ಆಡ್ತಾನೆ. ಘನತೆ ಕಳೆದುಕೊಂಡು ಹೀಗೆಲ್ಲಾ ಮಾತನಾಡಬಾರದು ಎಂದು ಹೇಳಿದ್ದರು.

Vishakha Bhat Heggar

View all posts by this author