ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಡಿ.ಕೆ ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಸಿಗುತ್ತಾ?; ಆ ವಿಚಾರ ನನಗೆ ಗೊತ್ತಿಲ್ಲ ಎಂದ ಡಿ.ಕೆ. ಸುರೇಶ್

DK Suresh: ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುತ್ತೇವೆ. ಆಗಾಗ್ಗೆ ಸರ್ಕಾರದ ಕೆಲಸಗಳಿಗೂ ಹೋಗಿರುತ್ತೇವೆ. ಇದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದ್ದಾರೆ.

ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ (ಸಂಗ್ರಹ ಚಿತ್ರ)

ಬೆಂಗಳೂರು, ಏ.29: ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುತ್ತೇವೆ. ಆಗಾಗ್ಗೆ ಸರ್ಕಾರದ ಕೆಲಸಗಳಿಗೂ ಹೋಗಿರುತ್ತೇವೆ. ಇದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ (DK Suresh) ಹೇಳಿದರು. ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮುಲ್) ಕಚೇರಿಯಲ್ಲಿ ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಡಿಸಿಎಂ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಏನಾದರೂ ಗುಡ್ ನ್ಯೂಸ್ ಇದೆಯೇ ಎಂದು ಕೇಳಿದಾಗ, ʼಪರಿಸರ ಮಾಲಿನ್ಯ ಉಂಟಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಅವರು ಹುಟ್ಟುಹಬ್ಬಕ್ಕೆ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಕಬೇಡಿ ಎಂದಿದ್ದಾರೆ. ಎಲ್ಲರೂ ದಯವಿಟ್ಟು ಇದನ್ನು‌ ಪಾಲನೆ ಮಾಡುವುದು ಒಳಿತುʼ ಎಂದರು‌.

ಅಧಿಕಾರ ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲವೇ ಎಂದು ಕೇಳಿದಾಗ, ʼಈ ಬಗ್ಗೆ ಚರ್ಚೆ ಮಾಡುವ ಸಮಯ ಇದಲ್ಲ. ಇದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದೇವೆʼ ಎಂದರು‌.‌ ಶಾಸಕರ ಒತ್ತಡ ಹೆಚ್ಚಾಗಿರುವ ಬಗ್ಗೆ ಕೇಳಿದಾಗ, ʼಮಂತ್ರಿಗಳಾಗಬೇಕು ಎಂಬ ಒತ್ತಡ ಇದೆʼ ಎಂದರು.

Nandini ghee to Tirupati: ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ವಾಹನಗಳಿಗೆ ಡಿ.ಕೆ. ಸುರೇಶ್ ಚಾಲನೆ; ಮಾಸಿಕ 2 ಲಕ್ಷ ಕೆ.ಜಿ ಸರಬರಾಜು

ಈ ಬಾರಿಯ ದೆಹಲಿ ಭೇಟಿ ಬಗ್ಗೆ ಕೇಳಿದಾಗ, ʼನಾನು ಹಾಗೂ ಶಿವಕುಮಾರ್ ಅವರು ಆಗಾಗ್ಗೆ ದೆಹಲಿಗೆ ಹೋಗುತ್ತಲೇ ಇರುತ್ತೇವೆ. ಅಪರೂಪಕ್ಕೆ ಹೋಗುವುದಾದರೆ ನೀವು ಕೇಳಬೇಕಿತ್ತು. ತಿಂಗಳಿಗೆ ಎರಡು ಸಲವಾದರೂ ಹೋಗುತ್ತೇವೆʼ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.