Street vendors: ಬಿಬಿಎಂಪಿಯಿಂದ ಬೀದಿ ವ್ಯಾಪಾರಿಗಳಿಗೆ ಶೀಘ್ರ ಗುರುತಿನ ಚೀಟಿ
ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕೆಂದು ಅಂತಿಮಗೊಳಿಸಿ ಗುರುತಿನ ಚೀಟಿ ನೀಡಿದ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚಿಸಿದರು.

ತುಷಾರ್ ಗಿರಿ ನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಗರದ ಸುಮಾರು 27,000 ಬೀದಿ ವ್ಯಾಪಾರಿಗಳಿಗೆ (Street Vendors) ಗುರುತಿನ ಚೀಟಿ (Identity Card) ನೀಡಲು ಯೋಜನೆ ರೂಪಿಸಿದೆ. ಸಮೀಕ್ಷೆ ಮೂಲಕ ಗುರುತಿಸಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ (Tushar Giri Nath) ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ, ಕಲ್ಯಾಣ ಕಾರ್ಯಕ್ರಮಗಳು, ಬೀದಿ ಬದಿ ವ್ಯಾಪಾರಿಗಳು, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೋಮವಾರ (ಮಾರ್ಚ್ 03) ರಂದು ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ, ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ ಸುಮಾರು 27 ಸಾವಿರ ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಎಲ್ಲರಿಗೂ ಶೀಘ್ರವಾಗಿ ಗುರುತಿನ ಚೀಟಿ ವಿತರಣೆ ಮಾಡಿ ಎಂದು ಹೇಳಿದರು.
ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಚೀಟಿಗಳ ವಿನ್ಯಾಸವನ್ನು ಅಂತಿಮಗೊಳಿಸಲಾಗುವುದು ಮತ್ತು ಗುರುತಿಸಲಾದ ವ್ಯಾಪಾರ ವಲಯಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು. ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನೂ ಪರಿಣಾಮಕಾರಿಯಾಗಿ ನಡೆಸಲು ಸೂಚಿಸಲಾಗಿದೆ. ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕೆಂದು ಅಂತಿಮಗೊಳಿಸಿ ಗುರುತಿನ ಚೀಟಿ ನೀಡಿದ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ತ್ವರಿತಗತಿಯಲ್ಲಿ ಗುರುತಿಸಿ ಎಂದು ಸೂಚಿಸಿದರು.
ಇದನ್ನೂ ಓದಿ: Viral Video: ಬಿಬಿಎಂಪಿ ನಿರ್ಲಕ್ಷ್ಯ; 83ರ ಇಳಿ ವಯಸ್ಸಿನಲ್ಲಿ ಬೀದಿ ಕಸ ಗುಡಿಸುವ ಅಜ್ಜ: ವಿಡಿಯೊ ವೈರಲ್