ಬೆಂಗಳೂರು: ಆರ್‌ಸಿಬಿ ಮತ್ತು ಜಿಟಿ (RCB vs GT) ನಡುವಿನ ಐಪಿಎಲ್ ಫೈನಲ್ (IPL 2026 Final) ಪಂದ್ಯದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಸಂಭ್ರಮಾಚರಣೆ ನಡೆಸಲು ಕಾಯುತ್ತಿದ್ದ ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರು ಶಾಕ್ ನೀಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ವಿಜಯೋತ್ಸವ ಆಚರಣೆ ಮಾಡಲು ಅವಕಾಶವಿರುವುದಿಲ್ಲ ಎಂದು ಈಗಾಗಲೇ ಬೆಂಗಳೂರು ಪೊಲೀಸರು ತಿಳಿಸಿದ್ದರು. ಇದೀಗ ನಗರದ ಪ್ರಮುಖ ಫ್ಲೈಓವರ್‌ಗಳನ್ನು ಇಂದು ರಾತ್ರಿ 11 ಗಂಟೆ ಬಳಿಕ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.
ಮೇ 31) ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆ ತನಕ ಬಂದ್ ಮಾಡಲು ಸೂಚಿಸಲಾಗಿದೆ. ಈಗಾಗಲೇ ಎಲೆಕ್ಟ್ರಾನಿಕ್ ಸಿಟಿಯ ಎಲಿವೇಟೆಡ್ ಫ್ಲೈಓವರ್, ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್ ಬಂದ್ ಮಾಡಲು ಸೂಚಿಸಲಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಂದ್ಯ ವೀಕ್ಷಿಸಲು ಎಲ್ಲೆಲ್ಲಿ ಸ್ಕ್ರೀನ್ ಅಳವಡಿಸಿದ್ದಾರೆ. ಯಾವ ಜಾಗಗಳಲ್ಲಿ ಹೆಚ್ಚು ಜನ ಸೇರುತ್ತಾರೆ ಅನ್ನೋ ಬಗ್ಗೆ ಪರಿಶೀಲನೆ ಕೂಡ ನಡೆಸಲಾಗಿದೆ. ಅಂತಹ ಜಾಗಗಳಲ್ಲಿ ವಿಶೇಷ ನಿಗಾ ವಹಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ.
IPL 2026 winner prize money: ಐಪಿಎಲ್ ಚಾಂಪಿಯನ್ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು?
ರಸ್ತೆಗಳಲ್ಲಿ ಸಂಭ್ರಮಾಚರಣೆಗೆ ಬ್ರೇಕ್
ಇಂದು ಐ.ಪಿ.ಎಲ್. 19 ನೇ ಆವೃತ್ತಿಯ ಫೈನಲ್ ಪಂದ್ಯದ ಪ್ರಯುಕ್ತ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಪ್ರಮುಖವಾಗಿ ರಸ್ತೆಗಳಲ್ಲಿ ಸಂಭ್ರಮಾಚರಣೆ, ಸುಗಮ ಸಂಚಾರಕ್ಕೆ ಅಡಚಣೆ ಮಾಡುವಂತಿಲ್ಲ ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಮಾರ್ಗಸೂಚಿಯಲ್ಲಿ ಏನಿದೆ?
- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಾರ್ಯಾಚರಣೆಯು ರಾತ್ರಿಯಾದ್ಯಂತ ಕೈಗೊಳ್ಳಲಾಗುವುದಲ್ಲದೇ, ನಾಕಬಂಧಿಯನ್ನು ನಗರದ ವಿವಿಧ ಸ್ಥಳಗಳಲ್ಲಿ ಮಾಡಿಕೊಂಡು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು.
- ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವ್ಹೀಲಿಂಗ್/ಡ್ರಾಗ್‌ರೇಸ್‌ಗಳಲ್ಲಿ ಭಾಗಿಯಾಗಿ ಇತರೆ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುವ ದ್ವಿಚಕ್ರ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ:112 ಗೆ ಮಾಹಿತಿ ನೀಡಬಹುದಾಗಿದೆ.
- ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ವಿಜಯೋತ್ಸವ ಆಚರಣೆ ಮಾಡಲು ಅವಕಾಶವಿರುವುದಿಲ್ಲ.
- ರಸ್ತೆಗಳ ಮದ್ಯದಲ್ಲಿ, ಪಾದಚಾರಿ ರಸ್ತೆಗಳಲ್ಲಿ ವಾಹನಗಳನ್ನು ಅನವಶ್ಯಕವಾಗಿ ನಿಲ್ಲಿಸಿಕೊಂಡು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಮಾಡುವಂತಿಲ್ಲ.
- ಸಂಭ್ರಮಾಚರಣೆಯ ನೆಪದಲ್ಲಿ ಕರ್ಕಶವಾಗಿ ಅಥವಾ ಅನಗತ್ಯವಾಗಿ ಹಾರ್ನ್ ಮಾಡುತ್ತಾ ವಾಹನಗಳನ್ನು ಚಲಾಯಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
- ವಾಹನಗಳ ಮೇಲ್ಮಾವಣಿಯನ್ನು (ಸನ್‌ರೂಫ್) ತೆರೆದು ಅಪಾಯಕಾರಿಯಾಗಿ ವಾಹನ ಚಲಾಯಿಸುವುದನ್ನು ನಿಷೇಧಿಸಿದೆ.
- ಸಂಚಾರ ಸಂಕೇತಗಳು, ಸಂಚಾರ ಮಾರ್ಗ ಬದಲಾವಣೆಗಳು, ಹಾಗೂ ಸಂಚಾರ ಪೊಲೀಸ್ ಸಿಬ್ಬಂದಿಯಿಂದ ನೀಡಲಾಗುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು.
- ಸಾರ್ವಜನಿಕರ ಸುಗಮ ಸಂಚಾರ ಹಾಗೂ ಸುರಕ್ಷತಾ ದೃಷ್ಟಿಯಿಂದ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಂಚಾರ ಪೊಲೀಸ್ ವಿಭಾಗದೊಂದಿಗೆ ಕೈಜೋಡಿಸಿ ಅಗತ್ಯ ಸಹಕಾರ ಒದಗಿಸಲು ಕೋರಿದೆ.