ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

YouTuber Amuku Dumuku: ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ; ಅಮುಕು ಡುಮುಕು ಮಂಜು ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ರೆಸ್ಟೋ ಬಾರ್‌ನಲ್ಲಿಊಟ ಮತ್ತು ಮದ್ಯ ಸೇವನೆ ಮಾಡಿದ ಬಳಿಕ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಮಂಜು ಅಲಿಯಾಸ್ ಅಮುಕು ಡುಮುಕು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಹಿಳೆ ಜತೆ ಅನುಚಿತ ವರ್ತನೆ; ಅಮುಕು ಡುಮುಕು ವಿರುದ್ಧ ಎಫ್‌ಐಆರ್‌

-

Prabhakara R
Prabhakara R Jul 16, 2026 10:47 PM

ಬೆಂಗಳೂರು: ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಸಿದ ಆರೋಪದಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು (Amuku Dumuku) ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರೆಸ್ಟೋ ಬಾರ್‌ನಲ್ಲಿ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿ, ಬಿಲ್ ನೀಡಲು ನಿರಾಕರಿಸಿದ ನಂತರ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಜು.9ರ ರಾತ್ರಿ ರೆಸ್ಟೋ ಬಾರ್‌ಗೆ ಹೋಗಿದ್ದ ಮಂಜು, ಊಟ ಮತ್ತು ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ. ಬಳಿಕ ಹೊರಗೆ ಹೋಗುತ್ತಿದ್ದಾಗ ತಡೆದು ಪ್ರಶ್ನೆ ಮಾಡಿದ್ದ ಮಹಿಳಾ ಸಿಬ್ಬಂದಿಗೆ ಸೆಲ್ಫಿ ಪೋಟೋ ಕೊಡುವಂತೆ ಕೇಳಿದ್ದಾರೆ. ಇದೇ ವೇಳೆ ಸ್ಥಳದಲ್ಲಿದ್ದ ಪಬ್ ಮ್ಯಾನೇಜರ್‌ ಮೇಲೆ ಹಲ್ಲೆಗೆ ಯತ್ನಿಸಿದ್ದು, ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ.

ಸದ್ಯ ಅಮುಕು ಡುಮುಕು ಹಾಗೂ ಮತ್ತವರ ಸ್ನೇಹಿತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಗಳಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಪತ್ನಿಗೆ ಕಿರುಕುಳ ಆರೋಪ; ಪ್ರೊಬೆಷನರಿ ಪಿಎಸ್ಐ ಬಂಧನ

ಬಳ್ಳಾರಿ: ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣದಲ್ಲಿ ನಡೆದಿದೆ‌. ಪ್ರಕರಣ ಸಂಬಂಧ ಪ್ರೊಬೆಷನರಿ ಪಿಎಸ್ಐನನ್ನು ಪೊಲೀಸರು ಬಂಧಿಸಿದ್ದಾರೆ. ದೊರೆನಾಯ್ಕ್ ಬಂಧಿತ ಪ್ರೊಬೇಷನರಿ ಪಿಎಸ್‌ಐ. ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡಾದ ದೊರೆನಾಯ್ಕ್ ಹಗರಿಬೊಮ್ಮನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ PSI ಆಗಿ ಕೆಲಸ ಕರ್ತವ್ಯ ನಿರ್ವಹಿಸುತ್ತಿದ್ದ.

ತನ್ನೂರು ಪೂಜಾರಹಳ್ಳಿ ತಾಂಡಾದ ಯುವತಿಯನ್ನು ಮೊದಲ ಮದುವೆಯಾಗಿದ್ದ ದೊರೆನಾಯ್ಕ್, ಆ ಬಳಿಕ ದಾವಣಗೆರೆ ಸಮೀಪದ ಹುಲಿಕಟ್ಟಿ ತಾಂಡಾದ ಯುವತಿಯನ್ನ 2ನೇ ಮದುವೆಯಾಗಿದ್ದ. 2ನೇ ಪತ್ನಿ ಕೌಟುಂಬಿಕ ಕಲಹದಿಂದ ಬೆಸತ್ತು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ್ದ ಪಿಎಸ್ಐ ಪತ್ನಿ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಹಗರಿಬೊಮ್ಮನ ಹಳ್ಳಿ ಪೊಲೀಸರು ಪ್ರೊಬೇಷನರಿ PSI ದೊರೆನಾಯ್ಕ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.