ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಏಪ್ರಿಲ್‌ 27ರಂದು ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ, ಸ್ಮರಣ ಸಂಚಿಕೆ ಬಿಡುಗಡೆ

KAS Officers Association: ಜನಸೇವೆಯಲ್ಲಿ ಅವಿರತವಾಗಿ ತೊಡಗಿರುವ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಕಟ್ಟಡವು ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡವನ್ನು ಪ್ರಸ್ತುತ ನವೀಕರಿಸಿ ಉದ್ಘಾಟಿಸಲಾಗುತ್ತಿದೆ. ಏಪ್ರಿಲ್ 27 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇನ್ ಫೆಂಟ್ರಿ ರಸ್ತೆಯ ಕೆಎಎಸ್ ಅಧಿಕಾರಿಗಳ ಸಂಘದ ಕಾರ್ಯಾಲಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಏ. 27ಕ್ಕೆ ಕೆಎಎಸ್ ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ

ಕೆಎಎಸ್‌ ಅಧಿಕಾರಿಗಳ ಸಂಘದ ಕಚೇರಿ. -

Prabhakara R
Prabhakara R Apr 26, 2026 6:20 PM

ಬೆಂಗಳೂರು: ಕೆಎಎಸ್ ಅಧಿಕಾರಿಗಳ ಸಂಘದ (KAS Officers Association) ನವೀಕರಿಸಿದ ಕಟ್ಟಡ ಮತ್ತು ಹೊಸದಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭವನ್ನು ಏಪ್ರಿಲ್ 27 ರಂದು ಸೋಮವಾರ ಸಂಜೆ 4 ಗಂಟೆಗೆ ನಗರದ ಇನ್ ಫೆಂಟ್ರಿ ರಸ್ತೆಯ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಜನಸೇವೆಯಲ್ಲಿ ಅವಿರತವಾಗಿ ತೊಡಗಿರುವ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಕಟ್ಟಡವು ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡವನ್ನು ಪ್ರಸ್ತುತ ನವೀಕರಿಸಿ ಉದ್ಘಾಟಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಮತ್ತು ಹೊಸದಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 'ಬೆಂಗಳೂರಿನ ಆತ್ಮ' ಶಿಲ್ಪ ಅನಾವರಣ, ಟರ್ಮಿನಲ್-2ರ ಸೌಂದರ್ಯಕ್ಕೆ ಹೊಸ ಮೆರುಗು

ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸಂಜೆಯನ್ನೂ ಏರ್ಪಡಿಸಿದ್ದು, ಖ್ಯಾತ ಹಿನ್ನೆಲೆ ಗಾಯಕರಾದ ಅನುರಾಧ ಭಟ್ ತಂಡದಿಂದ ಸಂಗೀತ ಕಛೇರಿ ನಡೆಯಲಿದೆ ಎಂದು ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಬಿ.ಶಿವಸ್ವಾಮಿ ತಿಳಿಸಿದ್ದಾರೆ.