ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಏಪ್ರಿಲ್‌ 7ರಂದು ಮಹಿಳಾ ದಿನಾಚರಣೆ; ಸಮೀಕ್ಷೆ ಕಾರ್ಯದಿಂದ ಮಹಿಳಾ ನೌಕರರಿಗೆ ವಿನಾಯಿತಿ

CS Shadakshari: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಏಪ್ರಿಲ್‌ 7ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಸರ್ಕಾರಿ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಅಂದು ಸಮೀಕ್ಷೆ/ಗಣತಿ ಕಾರ್ಯದಿಂದ ವಿನಾಯಿತಿ ನೀಡುವಂತೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.‌ ಷಡಾಕ್ಷರಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಸಮೀಕ್ಷೆಯಿಂದ ಮಹಿಳಾ ಸರ್ಕಾರಿ ನೌಕರರಿಗೆ ವಿನಾಯಿತಿ ನೀಡಲು ಪಟ್ಟು

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಿ.ಎಸ್.‌ ಷಡಾಕ್ಷರಿ -

Profile
Siddalinga Swamy Apr 2, 2026 3:15 PM

ಬೆಂಗಳೂರು, ಏ. 2: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಏಪ್ರಿಲ್‌ 7ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಸರ್ಕಾರಿ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಅಂದು ಸಮೀಕ್ಷೆ/ಗಣತಿ ಕಾರ್ಯದಿಂದ ವಿನಾಯಿತಿ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.‌ ಷಡಾಕ್ಷರಿ (CS Shadakshari) ತಿಳಿಸಿದ್ದಾರೆ. ಷಡಾಕ್ಷರಿ ಈ ಬಗ್ಗೆ ಮಹೇಶ್ವರ ರಾವ್ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ್ದರು.

ಕೇಂದ್ರ ಸರ್ಕಾರವು ರಾಷ್ಟ್ರದಾದ್ಯಂತ ಎರಡು ಹಂತಗಳಲ್ಲಿ ಸಾರ್ವಜನಿಕರ ಸಮೀಕ್ಷೆ/ಗಣತಿ ಕಾರ್ಯವನ್ನು ಹಮ್ಮಿಕೊಂಡಿದ್ದು, ಅದರಂತೆ ಪ್ರಥಮ ಹಂತದ ಸಮೀಕ್ಷೆ ಪ್ರಾರಂಭವಾಗಿದೆ. ಸಮೀಕ್ಷಾ ಕಾರ್ಯಕ್ಕೆ ರಾಜ್ಯ ಸರ್ಕಾರದ ಅಧಿಕಾರಿ, ನೌಕರರನ್ನು ನಿಯೋಜಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರಿನಲ್ಲಿ ಏಪ್ರಿಲ್‌ 7ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅದ್ಧೂರಿಯಾಗಿ ಹಮ್ಮಿಕೊಂಡಿದೆ. ಸಮಾರಂಭದಲ್ಲಿ ಸುಮಾರು 4-5 ಸಾವಿರ ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಸರ್ಕಾರಿ ನೌಕರರು ಭಾಗವಹಿಸಲಿದ್ದು, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರವು ʼವಿಶೇಷ ಸಾಂದರ್ಭಿಕ ರಜೆʼಯನ್ನು ನೀಡಿದೆ. ಪ್ರಸ್ತುತ ಸಮೀಕ್ಷೆ/ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಮಹಿಳಾ ನೌಕರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಸರ್ಕಾರಿ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಅಂದು ಸಮೀಕ್ಷೆ/ಗಣತಿ ಕಾರ್ಯದಿಂದ ವಿನಾಯಿತಿ ನೀಡುವ ಮೂಲಕ ಉದ್ದೇಶಿತ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ..

ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ

ಸಕಾರಾತ್ಮಕ ಸ್ಪಂದನೆ

ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಮುಖ್ಯ ಆಯುಕ್ತರು ಏಪ್ರಿಲ್‌ 7ರಂದು ಸಮೀಕ್ಷೆ ಕಾರ್ಯದಿಂದ ಸರ್ಕಾರಿ ಮಹಿಳಾ ನೌಕರರಿಗೆ ವಿನಾಯಿತಿ ನೀಡುವುದಾಗಿ ಭರವಸೆ ನೀಡಿದ್ದಾಗಿ ಸಿ.ಎಸ್.‌ ಷಡಾಕ್ಷರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.