ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೋರಿದ ತನಿಖಾ ಸಂಸ್ಥೆ: ನಾಗೇಂದ್ರಗೆ ಸಿಬಿಐ ತನಿಖೆಯ ಉರುಳು ?

ಸಚಿನ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಿರಂತರ ಧರಣಿಯ ನಡುವೆಯೇ, ನಾಗೇಂದ್ರ ಅವರಿಗೆ ಸಿಬಿಐ ‘ಪ್ರಾಸಿಕ್ಯೂ ಷನ್’ ಶಾಕ್ ನೀಡಿದೆ. ಭಾರೀ ವಿವಾದಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಯಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ನಾಗೇಂದ್ರ ಅವರನ್ನು ವಿಚಾರಣೆ ಗೊಳಪಡಿಸಲು ಹಾಗೂ ಕಾನೂನು ಕ್ರಮ ಮುಂದುವರಿಸಲು ರಾಜ್ಯಪಾಲರ ಅನುಮತಿ ಕೋರಿ ಪತ್ರ ಬರೆದಿದೆ ಎನ್ನಲಾಗಿದೆ

ಬೆಂಗಳೂರು: ವಿಧಾನಮಂಡಲದಲ್ಲಿ ಸಚಿನ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಿರಂತರ ಧರಣಿಯ ನಡುವೆಯೇ, ನಾಗೇಂದ್ರ ಅವರಿಗೆ ಸಿಬಿಐ ‘ಪ್ರಾಸಿಕ್ಯೂ ಷನ್’ ಶಾಕ್ ನೀಡಿದೆ. ಭಾರೀ ವಿವಾದಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಮತ್ತಷ್ಟು ಗಂಭೀರವಾಗುವ ಸಾಧ್ಯತೆಯಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ನಾಗೇಂದ್ರ ಅವರನ್ನು ವಿಚಾರಣೆ ಗೊಳಪಡಿಸಲು ಹಾಗೂ ಕಾನೂನು ಕ್ರಮ ಮುಂದುವರಿಸಲು ರಾಜ್ಯಪಾಲರ ಅನುಮತಿ ಕೋರಿ ಪತ್ರ ಬರೆದಿದೆ ಎನ್ನಲಾಗಿದೆ. ನಿಗಮದ ಸುಮಾರು 89.63 ಕೋಟಿ ರು. ಗಳನ್ನು ನಕಲಿ ಚೆಕ್‌ಗಳು ಮತ್ತು ಆರ್‌ಟಿಜಿಎಸ್ ಮೂಲಕ ಅಕ್ರಮವಾಗಿ ವರ್ಗಾಯಿಸಿ, ನೂರಾರು ಬೇನಾಮಿ ಖಾತೆಗಳ ಮೂಲಕ ದುರ್ಬಳಕೆ ಮಾಡಲಾಗಿದೆ ಎಂಬುದು ತನಿಖೆಯ ಪ್ರಮುಖ ಆರೋಪವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿ ಸಲ್ಲಿಸಿದ್ದು, ನಾಗೇಂದ್ರ ಅವರನ್ನು ಪ್ರಮುಖ ಆರೋಪಿಗಳ ಪೈಕಿ ಒಬ್ಬರಾಗಿ ಉಖಿಸಿದೆ ಎನ್ನಲಾಗಿದೆ. ಆದ್ದರಿಂದ ಇದೀಗ ಈ ಪ್ರಕರಣಕ್ಕೆ ಸಂಬಂಽಸಿದಂತೆ ಮತ್ತಷ್ಟು ವಿಚಾರಣೆ ಅಗತ್ಯವಿರುವುದರಿಂದ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ರಾಜ್ಯಪಾಲರಿಂದ ಅನುಮತಿ ದೊರೆತರೆ ನಾಗೇಂದ್ರ ವಿರುದ್ಧದ ಕಾನೂನು ಪ್ರಕ್ರಿಯೆಗೆ ವೇಗ ಸಿಗಲಿದ್ದು, ಇನ್ನೊಂದೆಡೆ ರಾಜಕೀಯವಾಗಿಯೂ ಕಾಂಗ್ರೆಸ್ ಗೆ ಬಹುದೊಡ್ಡ ಸವಾಲಾಗುವ ಸಾಧ್ಯತೆಯಿದೆ. ದೇಶಾದ್ಯಂತ ಸಂಚರಿಸಲು ನಾಗೇಂದ್ರಗೆ ಅನುಮತಿ ಈ ನಡುವೆ ಸಚಿವ ಬಿ.ನಾಗೇಂದ್ರ ಅವರು ದೇಶಾದ್ಯಂತ ಪ್ರಯಾಣಿಸಲು ಅನುಮತಿ ನೀಡಿರುವ ಹೈಕೋರ್ಟ್, ವಿಚಾ ರಣಾ ನ್ಯಾಯಾಲ ಯದ ಅನುಮತಿ ಪಡೆಯದೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶಿಸಿದೆ.

ಇದನ್ನೂ ಓದಿ: B Nagendra: ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ಬಿ. ನಾಗೇಂದ್ರಗೆ ತುಸು ರಿಲೀಫ್‌; ಹೈಕೋರ್ಟ್‌ ಮಹತ್ವದ ಆದೇಶ

ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯದ ಅನುಮತಿ ಇಲ್ಲದೆ ರಾಜ್ಯ ಬಿಟ್ಟು ಹೊರ ಹೋಗಬಾರದೆಂದು ವಿಧಿಸಿದ್ದ ಷರತ್ತು ಸಡಿಲಿಸಬೇಕು ಎಂದು ಕೋರಿ ಬಿ.ನಾಗೇಂದ್ರ ಸಲ್ಲಿಸಿದ್ದ ಮಧ್ಯಂತರ ಅರ್ಜಿಗೆ ಇ.ಡಿ ಪರ ವಕೀಲರು, ಆಕ್ಷೇಪಣೆ ಸಲ್ಲಿಸಿ, ಈ ಹಿಂದೆ ವಿಧಿಸಿದ್ದ ಷರತ್ತುಗಳನ್ನು ಸಡಿಲಿಸಬಾರದು ಎಂದು ಕೋರಿದರು.

ವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ರಾಜ್ಯಾದ್ಯಂತ ಸಂಚರಿಸಲು ಅವಕಾಶ ನೀಡಿದ್ದು, ದೇಶ ಬಿಟ್ಟು ಹೋಗಬೇಕಾದರೆ ವಿಚಾರಣಾ ನ್ಯಾಯಾ ಲಯದ ಅನುಮತಿ ಕಡ್ಡಾಯ ಎಂದು ಆದೇಶಿಸಿದೆ. ಅರ್ಜಿಯ ಸಂಬಂಧ ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಸಚಿವ ಸಂಪುಟಕ್ಕೆ ನೂತನವಾಗಿ ಸೇರ್ಪಡೆ ಯಾಗಿದ್ದಾರೆ.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಅಧಿಕೃತ ಕೆಲಸ ಕಾರ್ಯಗಳ ನಿಮಿತ್ತ ಅವರು ರಾಜ್ಯದ ಹೊರಗೆ ತೆರಳಬೇಕಾದ ಅನಿವಾರ್ಯತೆ ಇರುವುದರಿಂದ ಜಾಮೀನು ಷರತ್ತುಗಳನ್ನು ಸಡಿಲಿಸಬೇಕು ಎಂದು ಕೋರಿದರು. ತಮ್ಮ ಸಾಂವಿಧಾನಿಕ ಮತ್ತು ಅಧಿಕೃತ ಕರ್ತವ್ಯಗಳ ನಿರ್ವಹಣೆ ಗಾಗಿ ರಾಜ್ಯದ ಹೊರಗಡೆ ಸಂಚರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ, ಹಳೆಯ ಜಾಮೀನು ಷರತ್ತು ಮುಂದುವರೆದರೆ ಅದು ಅವರ ಅಽಕೃತ ಕರ್ತವ್ಯ ನಿರ್ವಹಣೆಗೆ ಮತ್ತು ರಾಜಕೀಯ ಸ್ಥಾನಮಾನಕ್ಕೆ ಗಂಭೀರ ಅಡ್ಡಿಯಾಗಲಿದೆ ಎಂದು ಹಿರಿಯ ವಕೀಲರು ವಾದ ಮಂಡಿಸಿದರು.

ಇಂದು ಕಾಂಗ್ರೆಸ್‌ ಪ್ರತಿಭಟನೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿರುವುದರಿಂದ ಸದನ ಕಲಾಪಗಳು ನಡೆಯುತ್ತಿಲ್ಲ. ಹೋರಾಟವನ್ನು ಮುಂದುವರಿಸುವ ಇರಾದೆಯನ್ನು ಪ್ರತಿಪಕ್ಷಗಳು ವ್ಯಕ್ತಪಡಿಸುತ್ತಿರುವುದರಿಂದ ಇದಕ್ಕೆ ಠಕ್ಕರ್ ಕೊಡಲು ಕಾಂಗ್ರೆಸ್ ಶಾಸಕರು ಸೋಮವಾರ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಬರಗಾಲ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿವೆ. ಅವುಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡದೇ ರಾಜಕೀಯ ಕಾರಣಕ್ಕೆ ಬಿಜೆಪಿ-ಜೆಡಿಎಸ್ ನಾಯಕರು ಸದನದ ಕಲಾಪವನ್ನು ವ್ಯರ್ಥಮಾಡುತ್ತಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.