ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao case: ನಟಿ ರನ್ಯಾ ರಾವ್ ಪ್ರಕರಣ; ರಾಜ್ಯ ಸರ್ಕಾರಕ್ಕೆ 230 ಪುಟಗಳ ತನಿಖಾ ವರದಿ ಸಲ್ಲಿಕೆ

Ranya Rao case: ಏರ್‌ಪೋರ್ಟ್‌ನಲ್ಲಿ ರನ್ಯಾ ರಾವ್‌ ಅವರಿಗೆ ಸಿಗುತ್ತಿದ್ದ ಪ್ರೋಟೋಕಾಲ್ ಬಗ್ಗೆ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.‌ ದುಬೈಗೆ ಹೋಗಿ ಬರುತ್ತಿದ್ದ ನಟಿ ರನ್ಯಾ ರಾವ್ ಅವರು ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ಬಳಕೆ ಮಾಡುತ್ತಿದ್ದರು. ಈ ವಿಚಾರ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್‌ ಅವರಿಗೂ ಗೊತ್ತಿತ್ತು. ಆದರೆ ರಾಮಚಂದ್ರರಾವ್ ಅವರು ಮಗಳಿಗೆ ಪ್ರೋಟೋಕಾಲ್ ನೀಡಲು ಹೇಳಿರಲಿಲ್ಲ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ನಟಿ ರನ್ಯಾ ರಾವ್ ಪ್ರಕರಣ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

Profile Prabhakara R Mar 30, 2025 4:54 PM

ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣದ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ.‌ ಪ್ರಕರಣದ ತನಿಖೆ ನಡೆಸಿರುವ ಗೌರವ್ ಗುಪ್ತ ನೇತೃತ್ವದ ಸಮಿತಿ ಇದೀಗ ರಾಜ್ಯ ಸರ್ಕಾರಕ್ಕೆ 230 ಪುಟಗಳ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದು, ಅದರಲ್ಲಿ ಏರ್‌ಪೋರ್ಟ್‌ನಲ್ಲಿ ರನ್ಯಾ ರಾವ್‌ ಅವರಿಗೆ ಸಿಗುತ್ತಿದ್ದ ಪ್ರೋಟೋಕಾಲ್ ಬಗ್ಗೆ ಉಲ್ಲೇಖಿಸಲಾಗಿದೆ.‌ ರನ್ಯಾ ರಾವ್ ಹಲವು ಬಾರಿ ಪ್ರೋಟೋಕಾಲ್ ಪಡೆದಿರೋದು ಬೆಳಕಿಗೆ ಬಂದಿದೆ. ಇದಕ್ಕೆ ಅವರು ಹಲವು ಬಾರಿ ಸರ್ಕಾರಿ ಕಾರು, ಪೊಲೀಸ್ ವಾಹನವನ್ನೂ ಬಳಕೆ ಮಾಡಿದ್ದಾರೆ. ಈ ಮಾಹಿತಿ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಗೊತ್ತಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಕೆಯಾಗಿರುವ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ದುಬೈಗೆ ಹೋಗಿ ಬರುತ್ತಿದ್ದ ನಟಿ ರನ್ಯಾ ರಾವ್ ಅವರು ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ಬಳಕೆ ಮಾಡುತ್ತಿದ್ದರು. ಈ ವಿಚಾರ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್‌ ಅವರಿಗೂ ಗೊತ್ತಿತ್ತು. ಆದರೆ ರಾಮಚಂದ್ರರಾವ್ ಅವರು ಮಗಳಿಗೆ ಪ್ರೋಟೋಕಾಲ್ ನೀಡಲು ಹೇಳಿರಲಿಲ್ಲ. ಅವರೇ ಹೇಳಿದ್ದಾರೆ ಅನ್ನೋದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಆದರೆ, ರನ್ಯಾ ರಾವ್‌ ಯಾವ ರೀತಿ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಅನ್ನೋ ಬಗ್ಗೆ ತನಿಖಾ ಸಮಿತಿ ಮಹತ್ವದ ಮಾಹಿತಿಯನ್ನು ಕಲೆ ಹಾಕಿದೆ.

ನಟಿ ರನ್ಯಾ ರಾವ್ ಕೇಸ್‌ನಲ್ಲಿ ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ಸಾಕ್ಷ್ಯ ಲಭ್ಯವಾದ ಮೇಲೆ ಈ ಕೇಸ್‌ನ ತನಿಖೆ ಮತ್ತಷ್ಟು ಚುರುಕಾಗಲಿದೆ. ರನ್ಯಾ ರಾವ್ ಜೊತೆಗೆ ಡಿಜಿಪಿ ರಾಮಚಂದ್ರರಾವ್ ಅವರಿಗೂ ಸಂಕಷ್ಟ ಎದುರಾಗಲಿದೆ.

ನಟಿ ರನ್ಯಾ ರಾವ್‌ಗೆ ಜಾಮೀನು ನಿರಾಕರಿಸಿದ ಬೆಂಗಳೂರಿನ ಸತ್ರ ನ್ಯಾಯಾಲಯ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ಹರ್ಷವರ್ದಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ನಿರಾಕರಿಸಿತ್ತು. ಎರಡು ವಾರಗಳ ಹಿಂದೆ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ರನ್ಯಾ ಜಾಮೀನು ಅರ್ಜಿ ತಿರಸ್ಕರಿಸಿತ್ತು.

ವಾದ-ಪ್ರತಿವಾದ ಆಲಿಸಿ, ಮಂಗಳವಾರ ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ಬೆಂಗಳೂರಿನ 64ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಈರಪ್ಪಣ್ಣ ಪವಡಿ ನಾಯ್ಕ್‌ ಗುರುವಾರ ಪ್ರಕಟಿಸಿದ್ದರು.

ರನ್ಯಾ ಪರ ಹಿರಿಯ ವಕೀಲ ಕಿರಣ್‌ ಜವಳಿ ಅವರು ವಾದ ಮಂಡಿಸಿ, “ಬಂಧಿಸಿದ ಬಳಿಕ ರನ್ಯಾಗೆ ಏಕೆ ಬಂಧಿಸಲಾಗುತ್ತಿದೆ ಎಂಬ ಮೆಮೊ ನೀಡಲಾಗಿಲ್ಲ. ಕಸ್ಟಮ್ಸ್‌ ಕಾಯಿದೆ ಸೆಕ್ಷನ್‌ 102ರ ಗೆಜೆಟೆಡ್‌ ಅಧಿಕಾರಿ ಅಥವಾ ಮ್ಯಾಜಿಸ್ಟ್ರೇಟ್‌ ಸಮ್ಮುಖದಲ್ಲಿ ಶೋಧ ನಡೆಸಬೇಕಿತ್ತು. ಆದರೆ, ಅದನ್ನು ಅನುಪಾಲಿಸಲಾಗಿಲ್ಲ. ಆರೋಪಿತ ಅಪರಾಧವು ಜೀವಾವಧಿ ಅಥವಾ ಮರಣ ದಂಡನೆ ವಿಧಿಸುವ ಶಿಕ್ಷೆಯಾಗಿಲ್ಲವಾದ್ದರಿಂದ ಬಿಎನ್‌ಎಸ್‌ಎಸ್‌ ಸೆಕ್ಷನ್‌ 480, ಉಪ ಸೆಕ್ಷನ್‌ 1ರ ಅಡಿ ಮಹಿಳೆಯಾಗಿರುವುದರಿಂದ ಬಿಡುಗಡೆ ಮಾಡಬೇಕು" ಎಂದು ವಾದಿಸಿದ್ದರು.

ಈ ಸುದ್ದಿಯನ್ನೂ ಓದಿ | Ranya Rao case: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ, ಕಾರಣ ಇಲ್ಲಿದೆ

ಡಿಆರ್‌ಐ ಪ್ರತಿನಿಧಿಸಿದ್ದ ವಕೀಲ ಮಧು ಎನ್.ರಾವ್‌ ಅವರು, “ರನ್ಯಾ ಎಸಗಿರುವ ಅಪರಾಧಕ್ಕೆ ಏಳು ವರ್ಷ ಜೈಲು ಮತ್ತು ದಂಡ ವಿಧಿಸಬಹುದಾಗಿದೆ. ಆರೋಪಿತ ಅಪರಾಧವು ಭಾರತದ ಆರ್ಥಿಕತೆಗೆ ಹೊಡೆತ ನೀಡಲಿದ್ದು, ರಾಷ್ಟ್ರದ ಭದ್ರತೆ ಅಪಾಯ ಉಂಟು ಮಾಡಲಿದೆ. ಚಿನ್ನ ಕಳ್ಳ ಸಾಗಣೆಯಂಥ ಕೃತ್ಯವು ಸಾರ್ವಜನಿಕ ನಿಧಿಗೆ ನಷ್ಟ ಉಂಟು ಮಾಡುವ ಪ್ರಕರಣವಾಗಿದ್ದು, ಕಸ್ಟಮ್ಸ್‌ ಕಾಯಿದೆ ಸೆಕ್ಷನ್‌ 104ರ ಅಡಿ ನಿಯಮಬದ್ಧವಾಗಿ ಆಕೆಯನ್ನು ಬಂಧನ ಪ್ರಕ್ರಿಯೆ ನಡೆಸಲಾಗಿದೆ. ರನ್ಯಾ ಬಳಿ ಯುಎಇ ನಿವಾಸಿ ಕಾರ್ಡ್‌ ಇದ್ದು, ಆಕೆಗೆ ಜಾಮೀನು ನೀಡಿದರೆ ಕಾನೂನು ಪ್ರಕ್ರಿಯೆ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ” ಎಂದಿದ್ದರು. ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ ಸತ್ರ ನ್ಯಾಯಾಲಯದ ಜಡ್ಜ್‌ ಜಾಮೀನು ನಿರಾಕರಿಸಿದ್ದರು.