ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPS officers Transfer: ಐವರು ಐಪಿಎಸ್‌ ಅಧಿಕಾರಿಗಳ ವರ್ಗ; ಗುಪ್ತಚರ ವಿಭಾಗದ ಎಡಿಜಿಪಿಯಾಗಿ ಎಸ್‌.ರವಿ ವರ್ಗಾವಣೆ

IPS officers Transfer: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಇದರ ಬೆನ್ನಲ್ಲೇ ಐವರು ಹಿರಿಯ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ವಿಭಾಗದ ಎಡಿಜಿಪಿಯಾಗಿ ಎಸ್‌.ರವಿ ವರ್ಗಾವಣೆ

ರಾಜ್ಯ ಗುಪ್ತಚರ ವಿಭಾಗದ ನೂತನ ಎಡಿಜಿಪಿ ಎಸ್‌.ರವಿ

Profile Prabhakara R Jun 6, 2025 9:16 PM

ಬೆಂಗಳೂರು: ರಾಜ್ಯ ಗುಪ್ತಚರ ವಿಭಾಗದ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಸೇರಿ ಐವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಇದರ ಬೆನ್ನಲ್ಲೇ ಐವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಪೊಲೀಸ್‌ ದೂರು ಪ್ರಾಧಿಕಾರದ (ಪಿಸಿಎಎಸ್) ಪ್ರಧಾನ ಕಾರ್ಯದರ್ಶಿ, ಎಡಿಜಿಪಿ ರವಿ. ಎಸ್ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಅದೇ ರೀತಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಅವರು ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿಯಾಗಿ, ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿ ಎಸ್. ಮುರುಗನ್ ಅವರು ನೇಮಕಾತಿ ವಿಭಾಗದ ಎಡಿಜಿಪಿಯಾಗಿ, ನೇಮಕಾತಿ ವಿಭಾಗದ ಎಡಿಜಿಪಿ ಕೆ.ವಿ. ಶರತ್ ಚಂದ್ರ ಅವರನ್ನು ಪೊಲೀಸ್‌ ದೂರು ಪ್ರಾಧಿಕಾರದ (ಪಿಸಿಎಎಸ್) ಪ್ರಧಾನ ಕಾರ್ಯದರ್ಶಿ, ಎಡಿಜಿಪಿ ಹಾಗೂ ಪೊಲೀಸ್‌ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಯಾರು ಎಲ್ಲಿಗೆ ವರ್ಗಾವಣೆ?

  • ಹೇಮಂತ್ ಎಂ. ನಿಂಬಾಳ್ಕರ್- ಆಯುಕ್ತರು, ವಾರ್ತಾ-ಸಾರ್ವಜನಿಕ ಸಂಪರ್ಕ ಇಲಾಖೆ
  • ರವಿ. ಎಸ್- ಎಡಿಜಿಪಿ, ಗುಪ್ತಚರ ವಿಭಾಗ
  • ಆರ್. ಹಿತೇಂದ್ರ- ಎಡಿಜಿಪಿ, ಸಂಚಾರ ಮತ್ತು ರಸ್ತೆ ಸುರಕ್ಷತೆ
  • ಎಸ್. ಮುರುಗನ್- ಎಡಿಜಿಪಿ, ಪೊಲೀಸ್ ನೇಮಕಾತಿ ವಿಭಾಗ
  • ಕೆ.ವಿ. ಶರತ್ ಚಂದ್ರ-‌ ಪಿಸಿಎಎಸ್ ಪ್ರಧಾನ ಕಾರ್ಯದರ್ಶಿ, ಪೊಲೀಸ್ ವಸತಿ ನಿಗಮ ಅಧ್ಯಕ್ಷ, ಎಂಡಿ

ವರ್ಗಾವಣೆಯಾದ ಹಿರಿಯ ಐಪಿಎಸ್‌ ಅಧಿಕಾರಿಗಳನ್ನು 2016 ರ ಐಪಿಎಸ್ (ವೇತನ) ನಿಯಮಗಳ ನಿಯಮ 12 ರ ಅಡಿಯಲ್ಲಿ, ಸದರಿ ನಿಯಮದ ಅನುಸೂಚಿ II ರಲ್ಲಿ ಸೇರಿಸಲಾದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ(ಎಡಿಜಿಪಿ) ಹುದ್ದೆ ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ ಸಮಾನವಾದ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ | Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಎಚ್‌ಡಿಕೆ ವಾಗ್ದಾಳಿ