ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

JDS Satyayatre: ಧರ್ಮಸ್ಥಳಕ್ಕೆ ಜೆಡಿಎಸ್‌ ಸತ್ಯಯಾತ್ರೆ ಶುರು; ಬೆಂಗಳೂರಿನಿಂದ ಹಾಸನಕ್ಕೆ ಹೊರಟ ನಿಖಿಲ್‌

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಇಂದು ಸತ್ಯಯಾತ್ರೆಯನ್ನು ಹಮ್ಮಿಕೊಂಡಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರ ಸ್ವಾಮಿ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪ್ರಾರಂಭವಾಗಿದೆ. ಈಗಾಗಲೇ ಬೆಂಗಳೂರಿನಿಂದ ಹಾಸನಕ್ಕೆ ನಿಖಿಲ್‌ ಕುಮಾರಸ್ವಾಮಿವರು ಹೊರಟಿದ್ದಾರೆ.

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಇಂದು ಸತ್ಯಯಾತ್ರೆಯನ್ನು ಹಮ್ಮಿಕೊಂಡಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರ ಸ್ವಾಮಿ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪ್ರಾರಂಭವಾಗಿದೆ. ಈಗಾಗಲೇ ಬೆಂಗಳೂರಿನಿಂದ ಹಾಸನಕ್ಕೆ ನಿಖಿಲ್‌ ಕುಮಾರಸ್ವಾಮಿವರು ಹೊರಟಿದ್ದಾರೆ. ಹಾಸನದಿಂದ ಜೆಡಿಎಸ್ ಮುಖಂಡರ ಜತೆ ಬಸ್ಸಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ ಎಂದು ಹೇಳಿದ್ದರು.

ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ. ಧರ್ಮಸ್ಥಳ ಧರ್ಮಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿ ಮಾತುಕತೆ ನಡೆಯಲಿದೆ. ಬಳಿಕ ಮಧ್ಯಾಹ್ನ 1:30 ಕ್ಕೆ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ವಿಪಕ್ಷ ನಾಯಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಜೆಡಿಎಸ್‌ ಯಾತ್ರೆ ಬಳಿಕ ಬಿಜೆಪಿ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಅಂದಿನ ಕಾರ್ಯಕ್ರಮಕ್ಕೆ ಬರುವ ಹಿಂದೂಗಳು ತಮ್ಮ ನಗರ, ಗ್ರಾಮಗಳಲ್ಲಿ ದೇವಸ್ಥಾನಗಳಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸ್ಥಳೀಯವಾಗಿ ದೇವರ ಮೆರವಣಿಗೆ ಮಾಡಬೇಕು. ಅಂದು ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಮೂಡಿಸುವ ಮತ್ತು ಸರಕಾರಕ್ಕೆ ಎಚ್ಚರಿಕೆ ನೀಡುವ ಬೃಹತ್ ಸಮಾವೇಶ ನಡೆಯುತ್ತದೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: DK Shivakumar: ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-ಆರ್‌ಎಸ್‌ಎಸ್ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ

ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಿ ಎಂದು ಮಂಜುನಾಥನ ಕೋಟ್ಯಂತರ ಭಕ್ತರು ಆಶಿಸುತ್ತೇವೆ. ಇದೇ ಆಗ್ರಹ ಮುಂದಿಟ್ಟುಕೊಂಡು ಸೆಪ್ಟೆಂಬರ್​ 1ರಂದು ಧರ್ಮಸ್ಥಳ ಚಲೋ ನಡೆಸುತ್ತೇವೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.