ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Covid Scam: ಕೋವಿಡ್ ಹಗರಣ; ರಾಜ್ಯ ಸರ್ಕಾರಕ್ಕೆ ಅಂತಿಮ‌ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ಕೋವಿಡ್ 19 ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ 2023ರ ಆಗಸ್ಟ್‌ನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ.

ಬೆಂಗಳೂರು, ಡಿ.31: ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ (Karnataka Covid Scam) ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ಅವರು ಬುಧವಾರ ಅಂತಿಮ‌ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.

ಕೋವಿಡ್ 19 ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ 2023ರ ಆಗಸ್ಟ್‌ನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿತ್ತು. ಈ ಆಯೋಗವು 2025ರ ಏಪ್ರಿಲ್‌ನಲ್ಲಿ 1,808 ಪುಟಗಳ ಎರಡನೇ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು.

2 ಮಧ್ಯಂತರ ವರದಿಗಳ ಆಧಾರದ ಮೇಲೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು 2024ರ ನವೆಂಬರ್‌ನಲ್ಲಿ ಸಚಿವ ಸಂಪುಟವು ತೀರ್ಮಾನಿಸಿತ್ತು. ಆದರೆ, ಇದರ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿ ಎಫ್​ಐಆರ್ ದಾಖಲಾಗಿತ್ತು. ಕೋವಿಡ್‌ ನಿರ್ವಹಣೆ ಸಂದರ್ಭದಲ್ಲಿ 167 ಕೋಟಿ ರೂ. ಪ್ರಮಾಣದ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಹಲವು ಅಧಿಕಾರಿಗಳ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರು‌ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ 2024ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

K C Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮದ ತನಿಖೆಗೆ ಸಂಬಂಧಿಸಿ ಇದೀಗ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆಯೋಗವು ವರದಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ, ಆದಾಗ್ಯೂ, ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಮತ್ತು ಪಾರದರ್ಶಕತೆಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ವರದಿಗಳನ್ನು ಆದಷ್ಟು ಬೇಗ ಬಿಡುಗಡೆ ಮಾಡಲು ಪರಿಗಣಿಸಬಹುದು ಎಂದು ಸರ್ಕಾರಕ್ಕೆ ನ್ಯಾ.ಜಾನ್ ಮೈಕೆಲ್ ಡಿ. ಕುನ್ಹಾ ತಿಳಿಸಿದ್ದಾರೆ.