ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kamal Haasan: ತಪ್ಪು ಮಾಡಿಲ್ಲ.. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ; ಮತ್ತೆ ಮೊಂಡುತನ ಮೆರೆದ ಕಮಲ್‌ ಹಾಸನ್‌

ಕನ್ನಡ ಭಾಷೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಸಾರ್ವಜನಿಕ ಕ್ಷಮೆಯಾಚಿಸಬೇಕೆಂಬ ಬೇಡಿಕೆಯನ್ನು ನಟ ಶುಕ್ರವಾರ ತಳ್ಳಿಹಾಕಿದ್ದಾರೆ. ತಾನು ಹೇಳಿದ ಹೇಳಿಕೆ ತಪ್ಪಾಗಿದ್ದರೆ ಮಾತ್ರ ನಾನು ಕ್ಷಮೆ ಕೇಳುತ್ತೇನೆ. ನಾನು ಹೇಳಿರುವುದು ಯಾವುದೂ ತಪ್ಪಲ್ಲ ಎಂದು ಅವರು ಹೇಳಿದ್ದಾರೆ.

ಚೆನ್ನೈ: ಕನ್ನಡ ಭಾಷೆಯ ( Kannada Row) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ (Kamal Haasan) ಸಾರ್ವಜನಿಕ ಕ್ಷಮೆಯಾಚಿಸಬೇಕೆಂಬ ಬೇಡಿಕೆಯನ್ನು ನಟ ಶುಕ್ರವಾರ ತಳ್ಳಿಹಾಕಿದ್ದಾರೆ. ತಾನು ಹೇಳಿದ ಹೇಳಿಕೆ ತಪ್ಪಾಗಿದ್ದರೆ ಮಾತ್ರ ನಾನು ಕ್ಷಮೆ ಕೇಳುತ್ತೇನೆ. ನಾನು ಹೇಳಿರುವುದು ಯಾವುದೂ ತಪ್ಪಲ್ಲ ಎಂದು ಅವರು ಹೇಳಿದ್ದಾರೆ. ಸುಮ್ಮನೆ ವಿವಾದವನ್ನು ಸೃಷ್ಠಿಸಲಾಗಿದೆ. ಜನರು ಇದರಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದೀಗ ಫಿಲಂ ಚೇಂಬರ್ ಹಾಗೂ ಕೆಲ ಕನ್ನಡಪರ ಸಂಘಟನೆಗಳು, ‘ಕಮಲ್ ಹಾಸನ್ ಕ್ಷಮೆ ಕೇಳದ ಹೊರತು ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿವೆ.

ಚೆನ್ನೈನಲ್ಲಿ ಈ ಬಗ್ಗೆ ಮಾತನಾಡಿರುವ ನಟ ಕಮಲ್ ಹಾಸನ್, ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ. ‘ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.



ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ನ ಕರ್ನಾಟಕದ ವಿತರಣೆ ಹಕ್ಕನ್ನು ಖರೀದಿಸಿರುವ ವೆಂಕಟೇಶ್ ಅವರನ್ನು ನಿನ್ನೆ ಫಿಲಂ ಚೇಂಬರ್​ಗೆ ಕರೆಸಿ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಜವಾಬ್ದಾರಿಯನ್ನು ವೆಂಕಟೇಶ್ ಹೆಗಲಿಗೆ ಹಾಕಲಾಗಿತ್ತು. ವೆಂಕಟೇಶ್ ಸಹ, ತಾವು ಪರಿಸ್ಥಿತಿಯ ಗಂಭೀರತೆಯನ್ನು ಕಮಲ್ ಅವರಿಗೆ ಮನವರಿಕೆ ಮಾಡಿ ಅಗತ್ಯ ಹೆಜ್ಜೆ ಇಡುವಂತೆ ಮನವಿ ಮಾಡುತ್ತೇವೆ ಎಂದಿದ್ದರು. ಇದೀಗ ಕಮಲ್‌ ಹಾಸನ್‌ ತಾವು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.

ಕಮಲ್‌ ಹಾಸನ್‌ ಹೇಳಿಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. . ಹಿರಿಯ ನಟರಾದ ಜಗ್ಗೇಶ್, ಸುಮಲತಾ, ಜಯಮಾಲಿನಿ, ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟಿ ರಮ್ಯಾ, ನಟ ಚೇತನ್ ಅಹಿಂಸ ಇನ್ನೂ ಕೆಲವರು ಕಮಲ್ ಹಾಸನ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಏನಿದು ವಿವಾದ?

ಮೇ 27ರಂದು `ಥಗ್ ಲೈಫ್’ (Thug Life) ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು.