CM Siddaramaiah: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು; ಮುಖ್ಯಮಂತ್ರಿ ಸಿದ್ದರಾಮಯ್ಯ
ನಾಡಿನಾದ್ಯಂತ ಕನಕದಾಸ ಜಯಂತಿಯನ್ನು (KanakaDasa Jayanti) ಆಚರಿಸಲಾಗುತ್ತಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪುಷ್ಪ ನಮನ ಸಲ್ಲಿಸುತ್ತಿರುವ ಸಿಎಂ -
ಬೆಂಗಳೂರು: ನಾಡಿನಾದ್ಯಂತ ಕನಕದಾಸ ಜಯಂತಿಯನ್ನು (Kanakadasa Jayanti) ಆಚರಿಸಲಾಗುತ್ತಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ (CM Siddaramaiah) ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಅವರು ಹೇಳಿದ್ದಾರೆ. ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು.
ಕನಕದಾಸರು ವಿಶ್ವಮಾನವರು
ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು. ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದರು. "ಕುಲಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ" ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು. ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಆಗಿದೆ.
ಈ ಸುದ್ದಿಯನ್ನೂ ಓದಿ: Sugarcane Farmers Protest: ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3200 ಜೊತೆಗೆ 100 ರೂ. ಸೇರಿದಂತೆ ಒಟ್ಟು 3300 ಒದಗಿಸಲಾಗುವುದು ಎಂದರು. ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದರು.
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ: ಪರಿಶೀಲನೆ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.