Anchor Jhanvi: ಬಿಗ್‌ಬಾಸ್ ಖ್ಯಾತಿಯ ಜಾಹ್ನವಿ ರಾಜಕೀಯಕ್ಕೆ ಎಂಟ್ರಿ; ಎಚ್‌ಡಿಕೆ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ
ನಟಿ ಹಾಗೂ ಟಿವಿ ನಿರೂಪಕಿ ಜಾಹ್ನವಿ ಅವರು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನ ಜೆ.ಪಿ. ಭವನದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾನುವಾರ ಸೇರ್ಪಡೆಯಾಗಿದ್ದಾರೆ. ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ರಶ್ಮಿ ರಾಮೇಗೌಡ ಅವರು ಪಕ್ಷದ ಧ್ವಜವನ್ನು ನೀಡಿ ಜಾಹ್ನವಿ ಅವರನ್ನು ಸ್ವಾಗತಿಸಿದರು.
ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ನಟಿ, ನಿರೂಪಕಿ ಜಾಹ್ನವಿ ಸೇರ್ಪಡೆ. -
ಬೆಂಗಳೂರು: ಕನ್ನಡದ ನಟಿ, ನಿರೂಪಕಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಜಾಹ್ನವಿ (Anchor Jhanvi) ಅವರು ರಾಜಕೀಯಕ್ಕೆ ಎಂಟ್ರಿ ನೀಡಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಅವರು ಪ್ರಾದೇಶಿಕ ಪಕ್ಷ ಜನತಾದಳ (ಜಾತ್ಯತೀತ) ಪಕ್ಷಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಭಾನುವಾರ ಸೇರ್ಪಡೆಯಾಗಿದ್ದಾರೆ.
ಪಕ್ಷದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಜಾಹ್ನವಿ ಅವರಿಗೆ ಪಕ್ಷದ ಶಾಲು ಹೊದಿಸಿ, ಅಧಿಕೃತ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿ ಪಕ್ಷದ ಪ್ರಮುಖ ಹಿರಿಯ ಮುಖಂಡರು, ಹೊಸದಾಗಿ ಪಕ್ಷ ಸೇರಿದ ಜಾಹ್ನವಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಗ್ರೇಟರ್ ಬೆಂಗಳೂರು ಪಕ್ಷದ ಅಧ್ಯಕ್ಷರಾದ ಎಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಟಿ.ಎನ್. ಜವರಾಯಿಗೌಡ, ಟಿ.ಎ. ಶರವಣ ಅವರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಮಾಜಿ ಆಗ್ತಾರೆ; ಬಿಡದಿ ಟೌನ್‌ಶಿಪ್‌ಗೆ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ
ದಳಪತಿಗಳ ನಾಯಕತ್ವದ ಮೇಲೆ ವಿಶ್ವಾಸ
ಪಕ್ಷದ ಸದಸ್ಯತ್ವ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜಾಹ್ನವಿ ಅವರು, ತಾವು ಜೆಡಿಎಸ್ ಸಿದ್ಧಾಂತಕ್ಕೆ ಆಕರ್ಷಿತರಾಗಿರುವುದಾಗಿ ತಿಳಿಸಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೂರದರ್ಶಿತ್ವದ ನಾಯಕತ್ವದಲ್ಲಿ ನನಗೆ ಅಪಾರ ವಿಶ್ವಾಸವಿದೆ. ರಾಜ್ಯದ ಮತ್ತು ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಈ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಆಶಯದೊಂದಿಗೆ ನಾನು ಜೆಡಿಎಸ್ ಸೇರಿದ್ದೇನೆ ಎಂದು ತಿಳಿಸಿದ್ದಾರೆ.