ಬೆಂಗಳೂರು: ತಮಿಳುನಾಡಿಗೆ ಕರ್ನಾಟಕ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ವಾಟಾಳ್ (Karnataka Bandh today) ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ ರಾಜ್ಯದ ಹಲವೆಡೆ ಬಂದ್‌ಗೆ ನೀರಸ ಪತ್ರಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕೆಲ ಸಂಘಟನೆಗಳು ಬಂದ್ ವಾಪಸ್ ಪಡೆಯುವುದಾಗಿ ಘೋಷಿಸಿವೆ. ಇದೀಗ ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.
ರಕ್ಷಣಾ ವೇದಿಕೆಯ ಪ್ರಮುಖ ನಾಯಕರು ನಮ್ಮನ್ನು ಭೇಟಿ ಮಾಡಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದರು. ರಾಜ್ಯದ ಹಿತಾಸಕ್ತಿಗಾಗಿ ನಿಲುವು ತೆಗೆದುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ ಮತ್ತು ಅವರಿಗೆ ನನ್ನ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ" ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆಗೂ ಮುನ್ನವೇ ವಾಟಾಳ್ ನಾಗರಾಜ್ ಬಂಧನ
ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನವೇ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುತ್ತಿದ್ದ ವೇಳೆ ವಾಟಾಳ್ ನಾಗರಾಜ್ ಅವರು, 'ನನ್ನನ್ನು ಯಾಕೆ ಅರೆಸ್ಟ್ ಮಾಡ್ತಿದ್ದೀರಿ?' ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ವಾಟಾಳ್ ನಾಗರಾಜ್ ಅವರು ಬೆಂಗಳೂರಿನ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಿ, ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಯೋಜಿಸಿದ್ದರು.