ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Menstrual leave: ಮಹಿಳಾ ಉದ್ಯೋಗಿಗಳಿಗೆ ವರ್ಷಕ್ಕೆ 12 ದಿನ ಋತುಚಕ್ರ ರಜೆ; ಕ್ಯಾಬಿನೆಟ್ ಅನುಮೋದನೆ

Menstrual leave: ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 ಜಾರಿಯಾದರೆ ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಕಂಪನಿಗಳು, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ.

ಬೆಂಗಳೂರು, ಅ. 09: ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ಋತು ಚಕ್ರ ರಜೆ (Menstrual leave) ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ಮಹಿಳಾ ಉದ್ಯೋಗಿಗಳಿಗೆ ವರ್ಷದಲ್ಲಿ 12 ದಿನ ವೇತನ ಸಹಿತ ರಜೆ ಸಿಗಲಿದೆ.

ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಕಂಪನಿಗಳು, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ಯಾವ ದಿನ ರಜೆ ಪಡೆಬೇಕು ಎಂಬುವುದನ್ನು ಹೆಣ್ಣುಮಕ್ಕಳು ತೀರ್ಮಾನ ಮಾಡಬಹುದಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಸಂತೋಷ್‌ ಲಾಡ್ ಅವರು, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ನೀಡಲಾಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ರಜೆ ತೆಗೆದುಕೊಳ್ಳಬಹುದು. ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಆದಷ್ಟೂ ಬೇಗ ಕಾಯ್ದೆ ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | DK Shivakumar: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ಖಂಡಿಸಬೇಕು: ಡಿ.ಕೆ.ಶಿವಕುಮಾರ್

ಈಗಾಗಲೇ ಬಿಹಾರ, ಕೇರಳ, ಒಡಿಶಾ, ಸಿಕ್ಕಿಂ ರಾಜ್ಯಗಳಲ್ಲಿ ಋತು ಚಕ್ರ ರಜೆ ನೀಡಲಾಗುತ್ತಿದೆ. 1992ರಲ್ಲಿ ಬಿಹಾರವು ದೇಶದಲ್ಲಿ ಮೊದಲ ಬಾರಿಗೆ ಮಹಿಳಾ ಉದ್ಯೋಗಿಗಳಿಗೆ ಋತು ಚಕ್ರ ರಜೆ ನೀತಿ ಜಾರಿ ಮಾಡಿತ್ತು.

ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದೆ. ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ಸೇರಿ ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

  • ಕೃಷಿ ಇಲಾಖೆಯಡಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಪಡೆಯುವ ತಲಾ ರೂ. 200.00 ಕೋಟಿಗಳ ಬಂಡವಾಳ ಸಾಲಕ್ಕೆ ರಾಜ್ಯ ಸರ್ಕಾರದ ಖಾತ್ರಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
  • ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ - ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಯಿತು.
  • ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
  • 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 452 ರಲ್ಲಿನ ಘೋಷಣೆಯನ್ವಯ, ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿನ (State Data Centre) ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶಕ್ಕಾಗಿ ವಾರ್ಷಿಕ ರೂ.38.33 ಕೋಟಿಗಳ ಅಂದಾಜು ವೆಚ್ಚದಲ್ಲಿ ಹೊಸ ತಂತ್ರಾಂಶಗಳನ್ನು ಅಳವಡಿಸಲು; ಸಚಿವ ಸಂಪುಟ ನಿರ್ಣಯಿಸಿದೆ.
  • 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ನವೆಂಬರ್ 2025 ರವರೆಗೆವಿಸ್ತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.
  • ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
  • ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNC ಗಳು IT ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ (Menstrual Leave Policy, 2025) ನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿದೆ.
  • ಲೋಕೋಪಯೋಗಿ ಇಲಾಖೆಯಡಿ ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ಚೇತನ ಕಾಮಗಾರಿಗಳನ್ನು ರೂ.2000.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ಹಾಗೂ ಮೊದಲನೇ ಹಂತದಲ್ಲಿ PRAMC ಅಧ್ಯಯನದಲ್ಲಿ ಗುರುತಿಸಿರುವ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ರೂ.1000.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
  • ಬೀದರ್ ಜಿಲ್ಲೆ ಔರಾದ್ (ಬಿ) ಪಟ್ಟಣ ಪಂಚಾಯತಿಯಿAದ “ಔರಾದ್ ಪುರಸಭೆ” ಯನ್ನು ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಣಯಿಸಿದೆ.
  • ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಯ ವತಿಯಿಂದ ಕರಿವೋಬನಹಳ್ಳಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP) ಮತ್ತು 5 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರಗಳ 05 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.26.02 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
  • ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜುನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಮತ್ತು ಅಗತ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ರೂ.550.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
  • ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ 1668.80 ಚ.ಮೀ ಕಲಬುರಗಿ ಜಿಲ್ಲೆಯ ಅಫಜಲಪುರ್ ಪುರಸಭೆ ವ್ಯಾಪ್ತಿಯಲ್ಲಿ 1120.60 ಚ.ಮೀ ಧಾರವಾಡ ಜಿಲ್ಲೆಯ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ 1287.77 ಚ.ಮೀ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಪುರಸಭೆ ವ್ಯಾಪ್ತಿಯಲ್ಲಿ 4200.00 ಚ.ಅಡಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿದೆ.
  • ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ.
  • ಸಿಪಿಸಿ ಪಾಲಿಟೆಕ್ನಿಕ್, ಮೈಸೂರು ಸಂಸ್ಥೆಯ ಕಟ್ಟಡದ ನವೀಕರಣ & ಹೊಸ ಸಂಸ್ಥೆಯ ಕಟ್ಟಡದ ನವೀಕರಣ & ಆಡಿಟೋರಿಯಂ ಅನ್ನು ಒಳಗೊಂಡಂತೆ ಮೂಲಭೂತ ಸೌಕರ್ಯಗಳನ್ನು ತಲಾ ರೂ.70.00 ಕೋಟಿಗಳು ಹಾಗೂ ರೂ.50.00 ಕೋಟಿಗಳ ಮೊತ್ತದಲ್ಲಿ ಒದಗಿಸಿರುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
  • ಕೇಂದ್ರ ಪುರಸ್ಕೃತ SASCI (Special Assistance to State Capital Investment – Development of Iconic Tourist Destination) ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯ ತಾತಗುಣಿಯಲ್ಲಿರುವ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ನಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕೇಂದ್ರ ಅಭಿವೃದ್ಧಿಪಡಿಸುವ ರೂ.99.17 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಸಂಬAಧಿಸಿದAತೆ ಮೊದಲನೇ ಹಂತದ ಕಾಮಗಾರಿಗಳನ್ನು ರೂ.55.33 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.
  • ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್ಗಳನ್ನು (ಪೌಷ್ಠಿಕ ಆಹಾರ ಕಿಟ್- ತೊಗರಿ ಬೆಳೆ 2ಕೆಜಿ, ಅಡುಗೆ ಎಣ್ಣೆ 1ಕೆಜಿ, ಸಕ್ಕರೆ 1ಕೆಜಿ, ಉಪ್ಪು 1ಕೆಜಿ.) ರೂ.61.19 ಕೋಟಿಗಳ ಮೊತ್ತದಲ್ಲಿ ವಿತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.