ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste Census:‌ ಮೇ 2ರ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಅಂತಿಮ ನಿರ್ಧಾರ: ಎಚ್.ಕೆ.ಪಾಟೀಲ್

H.K. Patil: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಮೇ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ ಎಂದಿದ್ದಾರೆ.

ಮೇ 2ರಂದು ಜಾತಿ ಗಣತಿ ವರದಿಯ ಬಗ್ಗೆ ಅಂತಿಮ ನಿರ್ಧಾರ

ಸಚಿವ ಎಚ್‌.ಕೆ.ಪಾಟೀಲ್‌.

Profile Ramesh B Apr 17, 2025 11:06 PM

ಬೆಂಗಳೂರು: ''ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ (Karnataka Cabinet Meeting) ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ'' ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ತಿಳಿಸಿದರು.

ಅವರು ಗುರುವಾರ (ಏ. 17) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.

ʼʼಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದೆ. ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏ. 24ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆʼʼ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನೂ ಓದಿ: Caste Census: ಜಾತಿ ಗಣತಿ ವರದಿ: ಅಂತಿಮ ತೀರ್ಮಾನಕ್ಕೆ ಬರಲಾಗದೆ ಸಚಿವ ಸಂಪುಟ ಸಭೆ ಮುಕ್ತಾಯ

ಸಮೀಕ್ಷೆಯ ಮಾನದಂಡಗಳ ಬಗ್ಗೆ ಚರ್ಚೆ

ʼʼಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ನೀಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆʼʼ ಎಂದು ವಿವರಿಸಿದರು.

ʼʼಈ ವರದಿಯನ್ನು ಇತ್ತೀಚೆಗೆ ಸರ್ಕಾರದ ಕೈಸೇರಿದ್ದು ಮಾನದಂಡಗಳನ್ನು ಚರ್ಚಿಸಿದ್ದೇವೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಲವಾರು ಮಾನದಂಡಗಳ ಬಗ್ಗೆ ಮಾತುಕತೆ ನಡೆಸಿದ್ದೇವೆʼʼ ಎಂದು ಸಚಿವರು ಪುನರುಚ್ಚರಿಸಿದರು.

ಹೊರ ಬಂದಿದ್ದು ಸರಿಯಾದ ವಿವರಗಳಲ್ಲ

ʼʼಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. ಶೇ. 94.17 ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ಸಮೀಕ್ಷಾ ವರದಿಯ ಮಾಹಿತಿ ಪತ್ರಿಕೆಗಳಲ್ಲಿ ಈಗಾಗಲೇ ಬಂದಿದೆ. ವರದಿ ಮಂಡನೆಯಾಗಿ ಚರ್ಚೆ ನಡೆದಿದೆʼʼ ಎಂದು ಸಚಿವರು ತಿಳಿಸಿದರು.