CM-DCM Breakfast meeting: ನಾಳೆ ಸಿಎಂ-ಡಿಸಿಎಂ ನಡುವೆ ಮತ್ತೊಂದು ಬ್ರೇಕ್‌ಫಾಸ್ಟ್ ಮೀಟಿಂಗ್; ಈ ಬಾರಿ ಡಿಕೆಶಿ ಮನೆಯಲ್ಲಿ!
Karnataka CM Row: ಶನಿವಾರ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದರು. ಇದೀಗ ಮತ್ತೊಂದು ಸುತ್ತಿನ ಸಭೆಗೆ ಸಮಯ ನಿಗದಿಯಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -
ಬೆಂಗಳೂರು, ನ.1: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿಬಂದಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಶನಿವಾರ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದ್ದರು. ಇದರ ಬೆನ್ನಲ್ಲೇ ಸಿಎಂ-ಡಿಸಿಎಂ ಅವರ ಮತ್ತೊಂದು ಸಭೆಗೆ (CM-DCM Breakfast meeting) ಮುಹೂರ್ತ ನಿಗದಿಯಾಗಿದೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉಪಾಹಾರಕ್ಕೆ ಆಹ್ವಾನಿಸಿದ್ದಾರೆ. ಹೌದು, ಮಂಗಳವಾರ ಬೆಳಗ್ಗೆ 9.30ಕ್ಕೆ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸದಲ್ಲಿ ಡಿಕೆಶಿ-ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ.
ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಮತ್ತು ಮುಖ್ಯಮಂತ್ರಿಗಳು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರನ್ನು ನಾಳೆ ಉಪಾಹಾರಕ್ಕೆ ಆಹ್ವಾನಿಸಿದ್ದೇನೆ. ಕರ್ನಾಟಕದ ಜನತೆಗೆ ನಾವು ನೀಡಿರುವ ಭರವಸೆಗಳನ್ನು ನೆರವೇರಿಸುವ ಕುರಿತು ಕೈಗೊಂಡಿರುವ ಸಾಮೂಹಿಕ ಪ್ರಯತ್ನಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಎಕ್ಸ್ ಪೋಸ್ಟ್
Me and the CM continue to work together as a team.
— DK Shivakumar (@DKShivakumar) December 1, 2025
I have invited the Hon’ble CM for breakfast tomorrow to discuss and strengthen our collective efforts to deliver on our promises to Karnataka.
ಯಾವುದೇ ಗೊಂದಲ ಇರಲ್ಲ ಎಂದಿದ್ದ ಸಿಎಂ
ಶನಿವಾರ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದರು. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದರು.
ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ: ಸಿಎಂ ಭರವಸೆ
ಕೆಲ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದಿದ್ದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನಿಸಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.