ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್‌; ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ತನಿಖೆಗೆ ಆದೇಶ

DGP Ramachandra rao Case: ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಆರೋಪದ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿತ್ತು. ಕಚೇರಿಯಲ್ಲಿ ಮಹಿಳೆ ಜತೆ ಅಶ್ಲೀಲ ವರ್ತನೆಯಲ್ಲಿ ತೊಡಗಿದ್ದ ವಿಡಿಯೋ ಜನವರಿ 19 ರಂದು ವೈರಲ್ ಆಗಿತ್ತು.

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್‌ ತನಿಖೆಗೆ ಡಿಜಿ-ಐಜಿಪಿ ಆದೇಶ

ಡಿಜಿಪಿ ರಾಮಚಂದ್ರ‌ ರಾವ್ (ಸಂಗ್ರಹ ಚಿತ್ರ) -

Prabhakara R
Prabhakara R Jan 22, 2026 10:24 PM

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ (DGP Ramachandra rao Case) ಸಂಬಂಧಿಸಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರಿ ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯರೊಂದಿಗೆ ಸರಸವಾಡಿದ ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿತ್ತು. ಇದೀಗ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ.

ಘಟನೆ ಸತ್ಯಾಸತ್ಯತೆಗಾಗಿ ಡಿಜಿ ಮತ್ತು ಐಜಿಪಿಗೆ ಸರ್ಕಾರ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಹಿತೇಂದ್ರ ನೇತೃತ್ವದಲ್ಲಿ ತನಿಖೆಗೆ ಡಿಜಿ ಮತ್ತು ಐಜಿಪಿ ಸೂಚನೆ ನೀಡಿದ್ದಾರೆ.

ಉನ್ನತ ಹುದ್ದೆಯಲ್ಲಿದ್ದ ಅಧಿಕಾರಿಯ ಕೇಸ್​ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿದ ಹಿನ್ನೆಲೆ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು. ರಾಮಚಂದ್ರ ರಾವ್ ಸರ್ಕಾರಿ ನೌಕರರಿಗೆ ಶೋಭೆಯಲ್ಲದ ರೀತಿಯಲ್ಲಿ ವರ್ತಿಸಿದ ಆರೋಪವಿದ್ದು, ಅಶ್ಲೀಲವಾಗಿ ವರ್ತಿಸಿರುವುದು ಕಂಡುಬಂದಿದೆ. ಇದು ಸರ್ಕಾರಕ್ಕೆ ಮುಜುಗರವನ್ನು ಉಂಟುಮಾಡಿದೆ. ಆದ್ದರಿಂದ ವಿಚಾರಣೆಯನ್ನು ಬಾಕಿ ಇರಿಸಿ ಡಾ. ಕೆ. ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.

ಏನಿದು ಪ್ರಕರಣ?

ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಜ.19ರಂದು ವೈರಲ್ ಆಗಿದ್ದವು. ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ ಅವರ ಮಲ ತಂದೆಯಾಗಿದ್ದಾರೆ.

DGP Ramachandra Rao: ರಾಸಲೀಲೆ ವಿಡಿಯೋ ವೈರಲ್; ಡಿಜಿಪಿ ರಾಮಚಂದ್ರ ರಾವ್ ಅಮಾನತು

ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿತ್ತು. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿತ್ತು. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಹೊರಬಂದಿದ್ದವು.