ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಅನುಕೂಲ ಆಗಿಲ್ಲ, ಯಾವ ಹೈ ಸ್ಪೀಡ್‌ ರೈಲೂ ಬರಲ್ಲ: ಡಿಕೆಶಿ ಟೀಕೆ

⁠Union Budget 2026: ಬಜೆಟ್‌ನಲ್ಲಿ ಬೆಂಗಳೂರು ಬಗ್ಗೆ ಅತಿ ಹೆಚ್ಚು ನಿರೀಕ್ಷೆ ಇತ್ತು. ಮೋದಿಯವರೇ ಇದನ್ನು ಗ್ಲೋಬಲ್ ಸಿಟಿ ಅಂತ ಹೇಳಿದರು. ಆದರೆ ಈ ಗ್ಲೋಬಲ್ ಸಿಟಿಗೆ ಏನು ಒತ್ತು ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರಶ್ನಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೇಂದ್ರ ಬಜೆಟ್‌ನಿಂದ (⁠Union Budget 2026) ನಮ್ಮ ರಾಜ್ಯಕ್ಕೆ ಯಾವುದೇ ಅನುಕೂಲ ಆಗಿಲ್ಲ. ಈಗ ಯಾವುದೋ ಹೊಸ ಯೋಜನೆಗೆ ಮಹಾತ್ಮ ಗಾಂಧಿ ಹೆಸರು ಇಟ್ಟಿದ್ದಾರೆ. ನಮ್ಮ ಉದ್ದೇಶ ಮನರೇಗಾ ಯೋಜನೆಯನ್ನು ಮತ್ತೆ ಜಾರಿ ಮಾಡಲಿ. 60:40 ಅನುಪಾತದಲ್ಲಿ ಅನುದಾನ ಸಾಧ್ಯವಾಗಲ್ಲ. ಯಾವ ಸರ್ಕಾರವೂ ಬಂಡವಾಳ ಹಾಕಲು ಹೋಗಲ್ಲ. ಇನ್ನು ನಮ್ಮ ರಾಜ್ಯಕ್ಕೆ ಬಜೆಟ್‌ನಲ್ಲಿ ದೊಡ್ಡ ಪಾಲು ಸಿಕ್ಕಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಟೀಕಿಸಿದ್ದಾರೆ.

ಬೆಂಗಳೂರಿಗೆ ಹೈಸ್ಪೀಡ್ ರೈಲು ಘೋಷಣೆ ವಿಚಾರದ ಬಗ್ಗೆ ಮಾತನಾಡಿ, ಯಾವ ಹೈಸ್ಪೀಡ್ ರೈಲು ರೀ? ಯಾವ ಸ್ಪೀಡ್ ರೈಲೂ ಬರಲ್ಲ. 50:50 ಅನುಪಾತದಲ್ಲಿ ಮಾಡಲು ಆಗಲ್ಲ, ಬೇಕಿದ್ದರೆ 90:10 ಯೋಜನೆ ಕೊಡಲಿ. ಆಗ ನಾವು ಶೇ.10 ಅನುದಾನ ಕೊಡುತ್ತೇವೆ. ಬೇರೆ ರಾಜ್ಯಗಳಿಗೆ ಅವರೇ ಮಾಡಿಕೊಟ್ಟಿದ್ದಾರೆ. ನಮ್ಮ ರಾಜ್ಯಕ್ಕೂ ಮಾಡಲಿ. ಬೆಂಗಳೂರು ಬಗ್ಗೆ ಅತಿ ಹೆಚ್ಚು ನಿರೀಕ್ಷೆ ಇತ್ತು. ಮೋದಿಯವರೇ ಇದನ್ನು ಗ್ಲೋಬಲ್ ಸಿಟಿ ಅಂತ ಹೇಳಿದರು. ಆ ಗ್ಲೋಬಲ್ ಸಿಟಿಗೆ ಏನು ಒತ್ತು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಇದು ಸಂಪೂರ್ಣ ನಿರಾಶಾದಾಯಕ ಬಜೆಟ್‌: ಈಶ್ವರ್‌ ಖಂಡ್ರೆ

Eshwar Khandre (1)

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಇದು ಸಂಪೂರ್ಣ ನಿರಾಶಾದಾಯಕವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್‌ನಲ್ಲಿ ಯಾವುದೇ ಗಣನೀಯ ಸುಧಾರಣೆ ಕಾಣಿಸಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ನಿಯಂತ್ರಣದ ಲಕ್ಷಣವೂ ಇಲ್ಲ. ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾದ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್‌ನಲ್ಲಿ ಕಾಣುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

Budget 2026: ಕೃಷಿ ವಲಯಕ್ಕೆ AI ಸ್ಪರ್ಶ; ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಸಿಕ್ಕಿದ್ದೇನು?

ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹೈದರಾಬಾದ್–ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಸಮಾಧಾನಕರ ಬಹುಮಾನವಷ್ಟೇ. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ನೀಡುವಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ.

ಶ್ರೀಗಂಧದ ಬೆಳೆಗೆ ಉತ್ತೇಜನದ ಮಾತು ಮಾತ್ರ:

ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಡಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಹೆಚ್ಚು ಇರುತ್ತದೆ. ಆದರೆ ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆ ಹೆಚ್ಚಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ಈಗಾಗಲೇ ನೂತನ ಶ್ರೀಗಂಧ ನೀತಿಯನ್ನು ರೂಪಿಸಿದೆ. ಕಡಲ ಆಮೆಗಳ ಸಂರಕ್ಷಣೆಯನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸಿ ಮಾದರಿಯ ಕೆಲಸ ಮಾಡಿದೆ. ಮಂಗಳೂರು ಮತ್ತು ಕಾರವಾರ ಭಾಗಗಳಲ್ಲಿ ಕಡಲ ಆಮೆಗಳ ಮೊಟ್ಟೆಗಳ ಸಂರಕ್ಷಣೆ ಮತ್ತು ಮರಿಗಳ ರಕ್ಷಣೆಗೆ ಪರಿಣಾಮಕಾರಿ ಕ್ರಮ ಕೈಗೊಂಡಿದೆ.

ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದರೂ, ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಬಜೆಟ್‌ನಲ್ಲಿಯೂ ರಾಜ್ಯದ ಯುವಕರಿಗೆ ಭರವಸೆ ನೀಡುವಂತಹ ಯಾವುದೇ ಯೋಜನೆ ಕಾಣುತ್ತಿಲ್ಲ.

⁠Union Budget 2026: ಕೇಂದ್ರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್‌: ಬಿ.ಎಸ್‌. ಯಡಿಯೂರಪ್ಪ

ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿರುವ ಈ ಬಜೆಟ್ ದೇಶದ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಸಚಿವರು ಟೀಕಿಸಿದ್ದಾರೆ.