ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dog Bite Relief Fund: ಬೀದಿ ನಾಯಿ ದಾಳಿಯಿಂದ ಮೃತಪಟ್ಟವರು, ಗಾಯಾಳುಗಳಿಗೆ ಪರಿಹಾರ ಘೋಷಣೆ

Karnataka government: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದಿ ನಾಯಿ ದಾಳಿಯಿಂದ ಮೃತಪಟ್ಟವರು ಹಾಗೂ ಗಾಯಾಳುಗಳಿಗೆ ಎಷ್ಟು ಪರಿಹಾರ ಸಿಗಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

ನಾಯಿ ದಾಳಿ (ಸಾಂದರ್ಭಿಕ ಚಿತ್ರ)

ಬೆಂಗಳೂರು, ನ.20: ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರು ಹಾಗೂ ಗಾಯಗೊಂಡವರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಬೀದಿ ನಾಯಿಗಳ ದಾಳಿಯಲ್ಲಿ (Dog Bite Relief Fund) ಮೃತಪಟ್ಟವರಿಗೆ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 5000 ರೂ. ಪರಿಹಾರ ಸಿಗಲಿದೆ. ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಮೃತಪಟ್ಟವರಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

5000 ರೂ. ಪರಿಹಾರದಲ್ಲಿ 3,500 ರೂ. ಗಾಯಾಳುಗಳಿಗೆ ನೇರವಾಗಿ ಪಾವತಿಯಾಗಲಿದ್ದು, ಉಳಿದ 1,500 ರೂ. ಚಿಕಿತ್ಸೆಗೆ ವೆಚ್ಚ ಮಾಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗುತ್ತದೆ. ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರು ಅಥವಾ ರೇಬೀಸ್‌ನಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ.

ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೀದಿನಾಯಿ ದಾಳಿ ಪ್ರಕರಣ ಹೆಚ್ಚಳ; ಪಿ. ಚಿದಂಬರಂ ಆತಂಕ

ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ತಮಿಳುನಾಡಿನಲ್ಲಿ ನಾಯಿ ಕಡಿತ ಪ್ರಕರಣ ಮತ್ತು ರೇಬೀಸ್ ಸಂಬಂಧಿತ ಸಾವುಗಳ ಸಂಖ್ಯೆಯಲ್ಲಿ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ವರದಿಯಂತೆ, ಈ ವರ್ಷವಷ್ಟೇ ರಾಜ್ಯದಲ್ಲಿ ಸುಮಾರು 5.25 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 28 ರೇಬೀಸ್‌ನಿಂದ ಸಾವು ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಶ್ವಾನ ಪ್ರಿಯರ ಕಾಳಜಿಗಳು ಮಾನ್ಯವಾಗಿವೆ. ಆದರೆ ಅವರು ಆತಂಕಕಾರಿ ಡೇಟಾವನ್ನು ಸಹ ಪರಿಗಣಿಸಬೇಕು. ಬೀದಿ ನಾಯಿಗಳನ್ನು ಪ್ರತ್ಯೇಕಿಸುವುದು, ಅವುಗಳನ್ನು ಸಂತಾನಹರಣ ಮಾಡುವುದು ಮತ್ತು ಲಸಿಕೆ ಹಾಕುವುದನ್ನು ಬೆಂಬಲಿಸಬೇಕು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ : Street Dog attack: ಬೆಂಗಳೂರು ವಿವಿ ಆವರಣದಲ್ಲಿ ಬೀದಿ ನಾಯಿ ದಾಳಿ, ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಕೆಲವು ಸಾರ್ವಜನಿಕ ಸ್ಥಳಗಳನ್ನು ಹೊರತುಪಡಿಸಿ, ಲಸಿಕೆ ಹಾಕಿದ ನಾಯಿಗಳನ್ನು ಮತ್ತೆ ಅವುಗಳ ವಾಸಸ್ಥಾನಗಳಿಗೆ ಬಿಡಲು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಶ್ವಾನ ಪ್ರಿಯರು ನ್ಯಾಯಾಲಯದ ನಿರ್ದೇಶನಗಳನ್ನು ಅನುಷ್ಠಾನಗೊಳಿಸಲು ಸರ್ಕಾರಗಳಿಗೆ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.