ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ (Karnataka Government) ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಲ್ಲಿಯವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇದ್ದರೆ, SC, ST ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿತ್ತು. ಆದರೀಗ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಆಗಲಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ
ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ.
ಹೆತ್ತವರನ್ನು ನೋಡಿಕೊಳ್ಳದ ಸರ್ಕಾರಿ ನೌಕರರಿಗೆ ಬಿಗ್ ಶಾಕ್; ಸಂಬಳ ಕಡಿತಕ್ಕೆ ಸರ್ಕಾರದ ಆದೇಶ
ದಲಿತ, ಹಿಂದುಳಿದ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ. ರಾಜ್ಯದ 08 ಜಿಲ್ಲೆಗಳಲ್ಲಿ ಪೌಷ್ಠಿಕ ಆಹಾರ ಯೋಜನೆಯಡಿ ಒಟ್ಟು 50,046 ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ರೂ. 145.03 ಕೋಟಿಗಳ ಅಂದಾಜು ಮೊತ್ತದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಿ ಮುಂದಿನ 12 ತಿಂಗಳವರೆಗೆ ವಿತರಿಸಲು ಸಂಪುಟ ಅನುಮೋದನೆ ನೀಡಿದೆ.