ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

56 ಸಾವಿರ ಹುದ್ದೆ ಭರ್ತಿ ಮಾಡಲು ಸರ್ಕಾರ ತೀರ್ಮಾನ: ಡಿ.ಕೆ.ಶಿವಕುಮಾರ್

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್‌ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದಾದ ನಂತರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿತ್ತು. ಈ ಬಗ್ಗೆ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಶೈಕ್ಷಣಿಕ ಮಹಾ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್.

ಬೆಂಗಳೂರು: ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿಯಿದೆ, ಇದರ ಬಗ್ಗೆ ಸರ್ಕಾರಕ್ಕೆ ಅರಿವಿದೆ. ನೆನ್ನೆ 56 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಹಾಗೂ ಸುವರ್ಣೋತ್ಸವ ಸಮಾರಂಭ ಮತ್ತು 55ನೇ ವರ್ಷದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.

ಅಮ್ಮನ ನೆನಪು ಪ್ರೀತಿಯ ಮೂಲ, ದೇವರ ನೆನಪು ಭಕ್ತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ. ಈ ಮೂರರ ನೆನಪು ಮನುಷ್ಯತ್ವದ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ. ಶಿಕ್ಷಣ ಕ್ಷೇತ್ರದಲ್ಲಿ ಗುರು ಸ್ಥಾನ ಪಡೆದುಕೊಂಡು ಈ ವೃತ್ತಿ ಆಯ್ಕೆ ಮಾಡಿಕೊಂಡ ನಿಮ್ಮೆಲ್ಲರಿಗೂ ನನ್ನ ಅಭಿನಂದನೆಗಳು.

ಇದೊಂದು ದೊಡ್ಡ ಪವಿತ್ರವಾದಂತಹ ವೃತ್ತಿ. ನೀವು ಈ ಸಮಾಜವನ್ನು ಬೆಳೆಸುತ್ತಿದ್ದೀರಿ. ನೀವು ಪಾಠ ಮಾಡಿದ ಮಕ್ಕಳು ಸಮಾಜದಲ್ಲಿ ಎತ್ತರಕ್ಕೆ ಬೆಳೆದಾಗ ನಿಮಗೆ ಆಗುವಂತಹ ಸಂತೋಷಕ್ಕೆ ಮಿತಿಯಿರುವುದಿಲ್ಲ. ಇತಿಹಾಸವನ್ನು ಸೃಷ್ಟಿಸುವಂತಹ ಮಕ್ಕಳನ್ನು ನೀವು ತಯಾರಿಸಬೇಕು. ಇತಿಹಾಸ ಮರೆತವನು, ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್‌ ಅವರು ಹೇಳಿದ್ದಾರೆ. ದೊಡ್ಡ ಕನಸು ಕಾಣುವಂತೆ ಮಕ್ಕಳನ್ನು ತಯಾರು ಮಾಡಬೇಕು. ದೊಡ್ಡ ಕನಸು ಕಾಣಲು ಶಿಸ್ತನ್ನು ಕಲಿಸಬೇಕು. ಪ್ರಾಥಮಿಕ ಶಾಲೆಯಲ್ಲಿ ನೀವು ಯಾವ ಬುನಾದಿ ಹಾಕುತ್ತೀರಿ, ಆ ಬುನಾದಿ ಕೊನೆಯವರೆಗೂ ಇರುತ್ತದೆ ಎಂದು ಹೇಳಿದರು.

ಶಿಕ್ಷಕರಿಗಾಗಿ ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ ಹಾಗೂ ರಾಮೋಜಿಗೌಡರು ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿಯಿದೆ, ಇದರ ಬಗ್ಗೆ ಸರ್ಕಾರಕ್ಕೆ ಅರಿವಿದೆ. ನಿನ್ನೆ 56 ಸಾವಿರ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದೆ.

ಶಾಸಕರು ದೆಹಲಿಗೆ ಹೋಗೋದು, ಫಾರಿನ್‌ಗೆ ಹೋಗೋದು ಗೊತ್ತಿಲ್ಲ ಎಂದ ಡಿ.ಕೆ. ಶಿವಕುಮಾರ್

ಹಳ್ಳಿಗಳಲ್ಲಿ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಸಿಗಬೇಕು. ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ನಿಮ್ಮ ಶಿಕ್ಷಕರ ಸಂಘಕ್ಕೆ ಬೆಂಗಳೂರಲ್ಲಿ ಜಾಗವನ್ನು ಕೊಡಲು ಸರ್ಕಾರ ಸಿದ್ಧವಿದ್ದು, ನಮ್ಮ ಸರ್ಕಾರ ಸದಾ ನಿಮ್ಮೊಂದಿಗೆ ಇರಲಿದೆ ಎಂದು ತಿಳಿಸಿದರು.