ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Transport Workers Salary Hike: ರಾಜ್ಯ ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ

ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯ ಮಾಡುತ್ತಿದ್ದರು. ಪರಿಷ್ಕೃತ ವೇತನವು 2026 ಜುಲೈ 1ರ ವೇತನದಲ್ಲಿ ಅನುಷ್ಠಾನಗೊಳಿಸಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಶೇ. 25ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಸಾರಿಗೆ ಪಟ್ಟು ಹಿಡಿದಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯ ಸಾರಿಗೆ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ (Transport Workers Salary Hike) ಶೇ. 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನಿಗಮಗಳ ಲಕ್ಷಾಂತರ ನೌಕರರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯ ಮಾಡುತ್ತಿದ್ದರು. ನೌಕರರ ಸಂಘಟನೆಗಳ ಜತೆ ನಡೆಸಿದ ಸುದೀರ್ಘ ಚರ್ಚೆ ಹಾಗೂ ಆರ್ಥಿಕ ಇಲಾಖೆಯ ಸಮ್ಮತಿಯ ನಂತರ, ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. 2025 ಏಪ್ರಿಲ್ 1 ರಿಂದ ವೇತನ ಪರಿಷ್ಕರಣೆ ಅನ್ವಯ ಆಗಲಿದೆ.

ಈ ವೇತನ ಹೆಚ್ಚಳದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ಹೆಚ್ಚುವರಿ ಹೊರೆ ಬೀಳಲಿದೆ. ಆದರೆ, ಈ ನಿರ್ಧಾರಕ್ಕೆ ಸಾರಿಗೆ ನೌಕರರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಶೇ. ಶೇ. 25ರಷ್ಟು ವೇತನ ಮಾಡಬೇಕು ಎಂದು ಪಟ್ಟುಹಿಡಿದಿದ್ದಾರೆ.

Bowring Hospital tragedy: ಬೌರಿಂಗ್ ಆಸ್ಪತ್ರೆ ದುರಂತ; ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಬೆಂಗಳೂರು ಡಿಸಿ

ಸಾರಿಗೆ ಸಂಘಟನೆಗಳ ಬೇಡಿಕೆಗಳೇನು?

  • ಸಾರಿಗೆ ನೌಕರರ ವೇತನ ಶೇಕಡಾ 25 ರಷ್ಟು ಹೆಚ್ಚಳ ಮಾಡಬೇಕು
  • 38 ತಿಂಗಳ ಹಿಂಬಾಕಿ ಹಣ, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ
  • 2024ರ ಜನವರಿ 1ರಿಂದ ಅನ್ವಯ ಆಗುವಂತೆ ಸಾರಿಗೆ ನೌಕರರಿಗೆ ಸಮಾನ ವೇತನ
  • ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು

ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ಖಚಿತ

ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಏಕಪಕ್ಷೀಯವಾಗಿ ವೇತನ ಹೆಚ್ಚಳ ಮಾಡಿದೆ ಎಂದು ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ 12% ವೇತನ ಹೆಚ್ಚಳದ ಸುದ್ದಿ ನಿಜವೇ ಆಗಿದ್ದಲ್ಲಿ, ಇಂತಹ ಆದೇಶವನ್ನು ಜಂಟಿ ಕ್ರಿಯಾ ಸಮಿತಿ ಒಪ್ಪುವುದಿಲ್ಲ. ಒಂದು ವೇಳೆ ಸರ್ಕಾರದ ಅಧಿಕೃತ ಆದೇಶದಲ್ಲೂ ಇದೇ ಪ್ರಮಾಣದ ವೇತನ ಹೆಚ್ಚಳವಿದ್ದು, ವೇತನ ಪರಿಷ್ಕರಣೆಯ ದಿನಾಂಕವನ್ನು ನೌಕರರ ಬೇಡಿಕೆಯಂತೆ 01.01.2024 ರ ಬದಲಾಗಿ, ಹಿಂದಿನ ಆದೇಶದಂತೆ 01.04.2025 ಕ್ಕೆ ನಿಗದಿಪಡಿಸಿದ್ದರೆ, ಮುಷ್ಕರ ಅನಿವಾರ್ಯವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಹಿಂದೆ ಕರೆ ನೀಡಿರುವಂತೆ ಮೇ 20 ರಿಂದ ನಡೆಯಲಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಸ್ಪಷ್ಟಪಡಿಸಿದೆ.

DA Hike: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ

ಅನಿರ್ದಿಷ್ಟಾವಧಿ ಮುಷ್ಕರವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ನೌಕರರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಇದರ ಅಂಗವಾಗಿ ಕಲಬುರಗಿ-ಮೇ 12, ಮೈಸೂರು- ಮೇ 14, ಬೆಂಗಳೂರು- ಮೇ 15 ರಂದು ಸಿದ್ಧತಾ ಸಮಾವೇಶಗಳನ್ನು ಆಯೋಜಿಸಲಾಗಿದೆ. ಸಾರಿಗೆ ನೌಕರರು ಯಾವುದೇ ರೀತಿಯ ಗೊಂದಲಗಳಿಗೆ ಒಳಗಾಗದೆ, ಹೆಚ್ಚಿನ ಸಂಖ್ಯೆಯಲ್ಲಿ ಈ ಸಿದ್ಧತಾ ಸಮಾವೇಶಗಳಲ್ಲಿ ಭಾಗವಹಿಸುವ ಮೂಲಕ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಜಂಟಿ ಕ್ರಿಯಾ ಸಮಿತಿಯ ಪರವಾಗಿ ಸಂಚಾಲಕರಾದ ಬಿ. ಜಯದೇವರಾಜೇ ಅರಸ್ ಅವರು ಪತ್ರದ ಮೂಲಕ ಕರೆ ನೀಡಿದ್ದಾರೆ.