ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಹೊಸ ಅಧ್ಯಕ್ಷರ ಪಟ್ಟಿ ಅಂತಿಮಗೊಳ್ಳದೆ ಇರುವುದರಿಂದ ಹಳಬರನ್ನೇ ತಾತ್ಕಾಲಿಕವಾಗಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.

ವಿಧಾನಸೌಧ (ಸಂಗ್ರಹ ಚಿತ್ರ)

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ (corporations and boards) ನಾಮನಿರ್ದೇಶನಗೊಂಡ ಅಧ್ಯಕ್ಷರ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಿ ಆದೇಶಿಸಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಸರ್ಕಾರದ ಉಪ ಕಾರ್ಯದರ್ಶಿ ಅಭಿಜಿನ್.ಬಿ ಆದೇಶ ಹೊರಡಿಸಿದ್ದು, ಆಡಳಿತ ಇಲಾಖೆಯ ಸಂಬಂಧಿಸಿದ ಅಧಿನಿಯಮ/ನಿಯಮಗಳ ರೀತ್ಯಾ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ತಿಂಗಳು ವಿಳಂಬವಾಗಿ ನಿಗಮ -ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಅಧಿಕಾರವಧಿ ಬಹುತೇಕ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಹೊಸ ಅಧ್ಯಕ್ಷರ ಪಟ್ಟಿ ಅಂತಿಮಗೊಳ್ಳದೆ ಇರುವುದರಿಂದ ಹಳಬರನ್ನೇ ತಾತ್ಕಾಲಿಕವಾಗಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇಂದಿನಿಂದ (ಫೆ.28) ಆರಂಭವಾಗಿದ್ದು, ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿವೆ.

ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ, ಬಾಗೇಪಲ್ಲಿಯ ಎನ್‌ಎಸ್‌ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಬಾಧಿತ

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪತ್ರವನ್ನು ತೋರಿಸಿ ವಿದ್ಯಾರ್ಥಿಗಳು ಈ ಪ್ರಯೋಜನ ಪಡೆಯಬಹುದು. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ಈ ಕ್ರಮವನ್ನು ಸಾರಿಗೆ ನಿಗಮಗಳು ಕೈಗೊಂಡಿವೆ.