ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದ ಕಟ್ಟಡ ಮಾಲೀಕರಿಗೆ ಗುಡ್‌ನ್ಯೂಸ್‌; ವಿದ್ಯುತ್ ಸಂಪರ್ಕಕ್ಕೆ ಒಸಿಯಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ

occupancy certificate: ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದರಿಂದ ಒಂದು ಬಾರಿ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಾರಾಮ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದರಿಂದ ಒಂದು ಬಾರಿ ವಿನಾಯಿತಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಬಗ್ಗೆ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಾರಾಮ ಅವರು ಆದೇಶ ಹೊರಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿ, ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಮತ್ತು ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 2400 ಚದರ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ + 3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್‌ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು, ಪೂರ್ಣಗೊಂಡು ವಿದ್ಯುತ್ ಸಂಪರ್ಕಕ್ಕಾಗಿ ದಿನಾಂಕ: 31.5.2026ರ ಒಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೆ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಈ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಒಂದು ಬಾರಿಯ ಕ್ರಮವಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿದೆ.

ಮುಂದುವರಿದು, ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ - ಇವುಗಳಿಗೆ ವಿದ್ಯುತ್‌ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಲಾಗಿದೆ.

ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಸಂಪರ್ಕ ನೀಡಲು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Bidadi Township: ಬಿಡದಿ ಟೌನ್‌ಶಿಪ್ ಕುರಿತು ಚರ್ಚೆಗೆ ಸಿದ್ಧ; ಜೂ.26ಕ್ಕೆ ವಿಧಾನಸೌಧಕ್ಕೆ ಬರುವಂತೆ ಕುಮಾರಸ್ವಾಮಿಗೆ ಸಿಎಂ ಡಿಕೆಶಿ ಆಹ್ವಾನ

ವಿದ್ಯುತ್ ಸಂಪರ್ಕಕ್ಕಾಗಿ 2,400 ಚ.ಅಡಿವರೆಗಿನ ನಿವೇಶನದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಲಾದ ಎಲ್ಲ ವಾಸದ ಮನೆಗಳಿಗೆ ಒಸಿ, ಸಿಸಿ ಪಡೆಯುವುದರಿಂದ ವಿನಾಯಿತಿ ನೀಡಲು ಇತ್ತೀಚೆಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದೀಗ ಒಸಿ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.