ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

DA Hike: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ

2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರು, ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಯ ನಿವೃತ್ತ ನೌಕರರಿಗೆ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ

ಸಾಂದರ್ಭಿಕ ಚಿತ್ರ -

Prabhakara R
Prabhakara R May 11, 2026 2:53 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. 2026ರ ಜನವರಿ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (Dearness Allowance) ಶೇ. 1.5 ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಮೂಲ ವೇತನದ ಶೇ. 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು (DA Hike) ಶೇ. 15.75ಕ್ಕೆ ಏರಿಸಲಾಗಿದೆ.

ಈ ಹೆಚ್ಚಳವು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರು, ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಯ ನಿವೃತ್ತ ನೌಕರರಿಗೂ ಅನ್ವಯವಾಗಲಿದೆ.

ಇನ್ನು ಆದೇಶದ ಪ್ರಕಾರ, ಜನವರಿ 1 ರಿಂದ ಏಪ್ರಿಲ್ ವರೆಗಿನ ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು (Arrears), 2026ರ ಮೇ ತಿಂಗಳ ವೇತನ ಅಥವಾ ಪಿಂಚಣಿಯೊಂದಿಗೆ ಪಾವತಿಸಲು ಸೂಚಿಸಲಾಗಿದೆ. ಅಂದರೆ, ಮೇ ತಿಂಗಳ ಸಂಬಳದಲ್ಲಿ ನೌಕರರು ಈ ಹೆಚ್ಚುವರಿ ಮೊತ್ತವನ್ನು ಒಟ್ಟಾಗಿ ಪಡೆಯಲಿದ್ದಾರೆ.

ಬ್ಯಾಂಕ್ ಆಫ್ ಇಂಡಿಯಾ: FY26 ರ ನಿವ್ವಳ ಲಾಭ ₹10,527 ಕೋಟಿ, ಲಾಭಾಂಶ 14.19% ನಷ್ಟು ಏರಿಕೆ

ನಗದು ರೂಪದಲ್ಲಿ ಪಾವತಿ

ಈ ಹೆಚ್ಚುವರಿ ತುಟ್ಟಿಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದು ರೂಪದಲ್ಲೇ ಪಾವತಿಸಲಾಗುತ್ತದೆ. 50 ಪೈಸೆ ಮತ್ತು ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸಬೇಕು ಹಾಗೂ 50 ಪೈಸೆಗಿಂತ ಕಡಿಮೆ ಇರುವುದನ್ನು ಕಡೆಗಣಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.