ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IAS, IPS Officers Transfer: ರಾಜ್ಯದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; 19 ಐಎಎಸ್‌, 20 ಐಪಿಎಸ್​ ಅಧಿಕಾರಿಗಳ ವರ್ಗಾವಣೆ, ಹಲವರಿಗೆ ಬಡ್ತಿ

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್., ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಮೀನಾ ನಾಗರಾಜ್ ಸೇರಿ ಐವರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಇನ್ನು ಯಾವೆಲ್ಲಾ ಅಧಿಕಾರಿಗಳು ವರ್ಗಾವಣೆ ಆಗಿದ್ದಾರೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ರಾಜ್ಯದ 19 ಐಎಎಸ್‌, 20 ಐಪಿಎಸ್​ ಅಧಿಕಾರಿಗಳ ವರ್ಗಾವಣೆ, ಹಲವರಿಗೆ ಬಡ್ತಿ

ವಿಧಾನಸೌಧ (ಸಂಗ್ರಹ ಚಿತ್ರ) -

Prabhakara R
Prabhakara R Dec 31, 2025 10:17 PM

ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲಿ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಐವರು ಜಿಲ್ಲಾಧಿಕಾರಿಗಳು ಸೇರಿ 19 ಐಎಎಸ್‌ ಅಧಿಕಾರಿಗಳು, 20 ಐಪಿಎಸ್​ ಅಧಿಕಾರಿಗಳ ವರ್ಗಾವಣೆ ಮತ್ತು 66 ಐಎಎಸ್‌ ಅಧಿಕಾರಿಗಳು, 23 ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ (IAS, IPS Officers Transfer) ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ರವೀಂದ್ರ ಪಿ.ಎನ್. ಅವರನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ತುಮಕೂರು ಜಿ.ಪಂ ಸಿಇಒ ಆಗಿದ್ದ ಪ್ರಭು ಜಿ. ಅವರನ್ನು ನೇಮಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಮೀನಾ ನಾಗರಾಜ್ ಅವರನ್ನು ಕಂದಾಯ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿದ್ದು, ಅವರ ಸ್ಥಾನಕ್ಕೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ನಾಗರಾಜ ಎನ್.ಎಂ. ಅವರನ್ನು ವರ್ಗಾಯಿಸಲಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ಕರ್ನಾಟಕ ಸ್ಟೇಟ್‌ ಮೆಡಿಕಲ್‌ ಸಪ್ಲೈ ಕಾರ್ಪೊರೇಷನ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಚಾಮರಾಜನಗರ ಡಿಸಿ ಶಿಲ್ಪಾ ನಾಗ್ ಅವರನ್ನು ಪಶುಸಂಗೋಪನಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

IAS officers transfer

IAS, IPS officers transfer

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಚಿಕ್ಕಬಳ್ಳಾಪುರ ಡಿಸಿಗೆ ವರ್ಗಾವಣೆ ಬಿಸಿ

ಚಿಕ್ಕಬಳ್ಳಾಪುರ: ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ವರ್ಷಾಚರಣೆಯ ಕೊಡುಗೆಯಾಗಿ 2016ರ ಬ್ಯಾಚ್‌ನ ಐಎಎಸ್‌ನ ಅಧಿಕಾರಿ ಪ್ರಭು ಜಿ. ಅವರನ್ನು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ತತ್‌ಕ್ಷಣವೇ ಜಾರಿಗೆ ಬರುವಂತೆ ವರ್ಗಾಯಿಸಿ ಜ.31ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಹಾಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರನ್ನು ರಾಜ್ಯ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಇದರಿಂದ ಬೆಳಗಿನಿಂದ ಹಿತೈಷಿಗಳು, ಹಿರಿಯ ಅಧಿಕಾರಿಗಳು, ಶುಭಾಶಯ ಕೋರಿ ಹರಸುತ್ತಿದ್ದ ಹುಟ್ಟುಹಬ್ಬದ ಸಂಭ್ರಮವು ಕಮರುವಂತೆ ಮಾಡಿದೆ.

ಉನ್ನಾವೊ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗರ್ ಜೈಲು ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂನಲ್ಲಿ ಸಿಬಿಐ ಅರ್ಜಿ

ನೂತನ ಜಿಲ್ಲಾಧಿಕಾರಿಯಾಗಿ ವರ್ಗವಾಗಿರುವ ಪ್ರಭು ಜಿ.ಅವರು ಇದಕ್ಕೂ ಮೊದಲು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು.