ರೋಹಿಣಿ ಸಿಂಧೂರಿಗೆ ಹಿನ್ನಡೆ; ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ಅವರು ತನ್ನ ಮೇಲೆ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಆಧರಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು.
ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ. -
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ (D Roopa Moudgil) ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಹಿನ್ನಡೆಯಾಗಿದೆ. ರೂಪಾ ಮೌದ್ಗಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದು ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, ಇದರಿಂದ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ಅವರು ತನ್ನ ಮೇಲೆ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಆಧರಿಸಿ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣ ದಾಖಲಿಸಿದ್ದರು.
ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿದ್ದ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.
ಏನಿದು ಪ್ರಕರಣ?
ರೋಹಿಣಿ ಸಿಂಧೂರಿಯವರು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ಅವರು ತನ್ನ ವಿರುದ್ಧ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ರೂಪಾಗೆ ಇದೊಂದು ಅಭ್ಯಾಸವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆಧಾರರಹಿತ ಆರೋಪ ಮಾಡುವ ಮೂಲಕ ಮಾಧ್ಯಮಗಳ ಗಮನ ಸೆಳೆಯಲು ಹಾಗೂ ತಾನು ದ್ವೇಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕ ಹಗೆ ಸಾಧಿಸಲು ಕೀಳುಮಟ್ಟದ ಪ್ರವೃತ್ತಿಯನ್ನು ರೂಪಾ ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದ್ದರು.
ಮುಂದುವರಿದು, ತನ್ನ ವಿರುದ್ಧ ಯಾವುದೋ ವೈಯಕ್ತಿಕ ಹಗೆ ಇಟ್ಟುಕೊಂಡು ಸುಳ್ಳು, ವೈಯಕ್ತಿಕ ನಿಂದನೆ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮ ಹಾಗೂ ವಾಟ್ಸಾಪ್ ಸ್ಟೇಟಸ್ ಸ್ಕ್ರೀನ್ ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೊಗಳನ್ನು ತನ್ನ ತೇಜೋವಧೆ ಮಾಡಲು ರೂಪಾ ಬಳಸಿದ್ದಾರೆ. ಈ ಫೋಟೊಗಳನ್ನು ಕೆಲವು ಅಧಿಕಾರಿಗಳಿಗೆ ಕಳುಹಿಸಿದ್ದೇನೆ ಎನ್ನುವ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ, ಆ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಬೇಕು ಎಂದು ರೂಪಾ ಅವರನ್ನು ಆಗ್ರಹಿಸುತ್ತೇನೆ ಎಂದು ವಿವರಿಸಿದ್ದರು.
ಸೇವಾ ನಡತೆ ನಿಯಮಗಳ ಉಲ್ಲಂಘನೆಗಾಗಿ ರೂಪಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಕ್ಷಮ ಪ್ರಾಧಿಕಾರಕ್ಕೆ ದೂರು ನೀಡಿದ್ದೇನೆ. ಅಲ್ಲದೇ, ಐಪಿಸಿ ವಿವಿಧ ಸೆಕ್ಷನ್‌ಗಳ ಅನ್ವಯ ರೂಪಾ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ವಿವರಿಸಿದ್ದರು.
Byrati Basavaraj: ಶಾಸಕ ಬೈರತಿ ಬಸವರಾಜ್ ಮತ್ತೆ ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ
ಇದನ್ನು ಆಧರಿಸಿ ರೂಪಾ ಅವರು ಮಾನಹಾನಿ ಪ್ರಕರಣ ಹೂಡಿದ್ದು, ಸ್ವಯಂ ಹೇಳಿಕೆಯನ್ನೂ ದಾಖಲಿಸಿದ್ದರು. ಇದರ ಆಧಾರದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಂಜ್ಞೇ ಪರಿಗಣಿಸಿತ್ತು.