ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

B Nagendra: ಸಚಿವ ಬಿ. ನಾಗೇಂದ್ರಗೆ ಮತ್ತಷ್ಟು ರಿಲೀಫ್‌; ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

Valmiki Corporation scam: ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಅನುಮತಿಯಿಲ್ಲದೇ ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತಿಗೆ ಹೈಕೋರ್ಟ್ ತಡೆ ನೀಡಿದೆ. ಇದೀಗ ಜಾಮೀನು ಷರತ್ತು ಸಡಿಲಗೊಂಡ ಹಿನ್ನೆಲೆಯಲ್ಲಿ ಇತರ ರಾಜ್ಯಗಳಿಗೆ ಅವರು ಪ್ರಯಾಣಿಸಬಹುದಾಗಿದೆ.

ಸಚಿವ ಬಿ.ನಾಗೇಂದ್ರ.

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation scam) ಕಾನೂನು ಸಂಕಷ್ಟ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ (B Nagendra) ಅವರಿಗೆ ಮತ್ತಷ್ಟು ರಿಲೀಫ್‌ ಸಿಕ್ಕಿದೆ. ಸಚಿವ ಜಿ. ನಾಗೇಂದ್ರ ಅವರು ಕೋರ್ಟ್ ವಿಧಿಸಿದ್ದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ ದೆಹಲಿಗೆ ಪ್ರವಾಸ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಅವರ ಜಾಮೀನು ಷರತ್ತನ್ನು ಹೈಕೋರ್ಟ್‌ ಸಡಿಲಗೊಳಿಸಿದೆ.

ಕೋರ್ಟ್ ಅನುಮತಿಯಿಲ್ಲದೇ ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಜಾಮೀನು ಷರತ್ತನ್ನು ಸಡಿಲಿಸಲಾಗಿದ್ದು, ಈ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆದರೆ ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಷರತ್ತನ್ನು ಮಾರ್ಪಾಡು ಮಾಡಲಾಗಿದೆ.

ಸಚಿವ ಬಿ. ನಾಗೇಂದ್ರ ದೆಹಲಿಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಸಚಿವ ಬಿ. ನಾಗೇಂದ್ರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಷರತ್ತನ್ನು ಮಾರ್ಪಾಡು ಮಾಡಲಾಗಿದೆ. ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಸೂಚಿಸಿದೆ. ಅಲ್ಲದೇ ಹೈಕೋರ್ಟ್​​ ಈ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ಇಡಿಗೆ ಆಗಸ್ಟ್ 12ರವರೆಗೆ ಕಾಲಾವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಸಚಿವ ಬಿ. ನಾಗೇಂದ್ರ ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿಶೇಷ ಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ರಾಜ್ಯ ಬಿಟ್ಟು ಹೋಗಬಾರದು ಎಂಬ ಷರತ್ತು ಇತ್ತು. ಇದೀಗ ಆ ಷರತ್ತು ಸಡಿಲಗೊಂಡ ಹಿನ್ನೆಲೆಯಲ್ಲಿ ಇತರ ರಾಜ್ಯಗಳಿಗೆ ಪ್ರಯಾಣಿಸಬಹುದಾಗಿದೆ. ಆದರೆ, ದೇಶ ಬಿಟ್ಟು ಹೋಗುವುದಕ್ಕೆ ಕೋರ್ಟ್ ಅನುಮತಿ ಕಡ್ಡಾಯವಾಗಿದೆ.