ರಾಜ್ಯ ಸರ್ಕಾರಕ್ಕೆ ಭಾರಿ ಮುಖಭಂಗ; ಕೋಮುಗಲಭೆ ಸೇರಿ 52 ಕ್ರಿಮಿನಲ್ ಪ್ರಕರಣ ವಾಪಸಾತಿ ನಿರ್ಧಾರಕ್ಕೆ ಮಧ್ಯಂತರ ತಡೆ
52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಲ್ಲಿ ಸಚಿವ ಯು.ಟಿ. ಖಾದರ್ ಶಿಫಾರಸು ಮಾಡಿದ ಪ್ರಕರಣಗಳೂ ಇವೆ ಎನ್ನುವುದು ವಿಶೇಷ. ಆ ಮೂಲಕ ರಾಜ್ಯ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಜು. 2: 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ (High Court) ವಿಭಾಗೀಯ ಪೀಠ ತಡೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಲ್ಲಿ ಸಚಿವ ಯು.ಟಿ. ಖಾದರ್ ಶಿಫಾರಸು ಮಾಡಿದ ಪ್ರಕರಣಗಳೂ ಇವೆ ಎನ್ನುವುದು ವಿಶೇಷ. ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಸೇರಿ 52 ಪ್ರಕರಣ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. 2026ರ ಮೇ 27ರ ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಹೈಕೋರ್ಟ್ ಇದೀಗ ತಡೆ ಒಡ್ಡಿದೆ. ಕೆಲವು ಕೋಮು ಗಲಭೆ ಪ್ರಕರಣ ಸೇರಿ ಹಲವು ರಾಜಕಾರಣಿಗಳು, ರೈತಪರ, ಕನ್ನಡಪರ ಹಾಗೂ ಸಾಮಾಜಿಕ ಹೋರಾಟಗಾರರ ವಿರುದ್ಧದ 52 ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.
ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾ. ಕೆ.ಎಸ್. ಹೇಮಲೇಖಾ ಅವರ ವಿಭಾಗೀಯ ಪೀಠದಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆದು ಈ ತೀರ್ಪು ಹೊರ ಬಿದ್ದಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು ಇದೇ ರೀತಿಯ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್‌ನ ಹಿಂದಿನ ತೀರ್ಪಿಗೆ ಪ್ರಾಥಮಿಕ ದೃಷ್ಟಿಯಿಂದ ವಿರುದ್ಧವಾಗಿದೆ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪ್ರಾಸಿಕ್ಯೂಷನ್ ನಿರ್ದೇಶನಾಲಯಕ್ಕೆ ನೀಡಲಾದ ನೋಟಿಸ್ಗೆ ಎರಡು ವಾರಗಳೊಳಗೆ ಉತ್ತರ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 28ರಂದು ನಡೆಯಲಿದೆ. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗಿರೀಶ್ ಭಾರದ್ವಾಜ್ ಎಂಬವರು ಸಲ್ಲಿಸಿದ್ದರು.
ಕರ್ನಾಟಕ ಹೈಕೋರ್ಟ್ ಮೊರೆ ಹೋದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್!
ಕಾನೂನು ಮೀರಿ ಆದೇಶ ಮಾಡಿಲ್ಲ
ಈ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ʼʼಕೋರ್ಟ್ ಆದೇಶದ ಕಾಪಿ ಸಿಕ್ಕಿದ ಬಳಿಕ ಚರ್ಚೆ ಮಾಡುತ್ತೇವೆ. ಆ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಕೇಸ್ ಕೂಡ ಸೇರಿವೆ. ಕಾನೂನು ಮೀರಿ ನಾವು ಯಾವುದೇ ಆದೇಶವನ್ನು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲೇ ಸಂಪುಟದಲ್ಲಿ ನಿರ್ಧಾರ ಮಾಡಲಾಗಿತ್ತುʼʼ ಎಂದವರು ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು 2024ರ ಅಕ್ಟೋಬರ್ 15ರಂದು ಇದೇ ರೀತಿಯ ಆದೇಶ ಹೊರಡಿಸಿತ್ತು. ಆಗ 43 ಪ್ರಕರಣಗಳನ್ನು ಹಿಂಪಡೆಯುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ನಿರ್ದೇಶನ ನೀಡಿತ್ತು. ಇದರಲ್ಲಿ 2022ರ ಹುಬ್ಬಳ್ಳಿ ಗಲಭೆ ಕೂಡ ಸೇರಿದೆ. ಈ ಗಲಭೆಯ ಸಮಯದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಮಾಡಿದ ವ್ಯಕ್ತಿಯನ್ನು ಹಸ್ತಾಂತರಿಸುವಂತೆ ಆಗ್ರಹಿಸಿ ಗುಂಪೊಂದು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿತ್ತು.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.