ಬೆಂಗಳೂರು, ಡಿ.2: ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 ಟೂರ್ನಿಯನ್ನು (Karnataka Media Champion League -2026) ಹಮ್ಮಿಕೊಳ್ಳಲಾಗಿದೆ ಎಂದು ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್ ನ ಮುಖ್ಯಸ್ಥ ಕಿರಣ್ ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಅಂತರ್ ಮಾಧ್ಯಮ ಟೂರ್ನಿಯಾಗಿದೆ. ಈ ಟೂರ್ನಿ ಮೂಲಕ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ತಡೆಗಟ್ಟುವುದರ ಬಗ್ಗೆ ಸಮಾಜಮುಖಿ ಸಂದೇಶವನ್ನು ನೀಡಲಾಗುವುದು ಎಂದು ಹೇಳಿದರು.
ಅಂತರ್ ಮಾಧ್ಯಮ ಟೂರ್ನಿಯನ್ನು 2026ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುವುದು. ತಂಡಗಳ ನೋಂದಣಿ, ವೇಳಾಪಟ್ಟಿ, ಮೈದಾನಗಳ ವಿವರವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಈ ಟೂರ್ನಿ ಮೂಲಕ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ತಡೆಗಟ್ಟುವುದರ ಬಗ್ಗೆ ಸಮಾಜಮುಖಿ ಸಂದೇಶವನ್ನು ನೀಡಲಾಗುವುದು ಎಂದು ತಿಳಿಸಿರುವ ಅವರು, ಚಾಂಪಿಯನ್ ತಂಡಕ್ಕೆ 10 ಲಕ್ಷ ರೂಪಾಯಿ ನಗದು ಬಹುಮಾನ. ರನ್ನರ್ ಅಪ್ ತಂಡಕ್ಕೆ 5 ಲಕ್ಷ ರೂಪಾಯಿ, ಸೆಮಿಫೈನಲ್ ಪ್ರವೇಶಿಸಿದ ತಂಡಗಳಿಗೆ ತಲಾ 2.5 ಲಕ್ಷ ರೂಪಾಯಿ ನೀಡಲಾಗುವುದು. ಈ ಟೂರ್ನಿಯಲ್ಲಿ ಆಡುವ ಮಾಧ್ಯಮ ತಂಡಗಳಿಗೆ ಪ್ರವೇಶ ಉಚಿತ ಎಂದು ಆಯೋಜಕ ಕಿರಣ್ ಶೆಟ್ಟಿ ಹೇಳಿದರು.
ಡಿ.3ರಿಂದ ಫ್ಯಾಷನ್ ಫ್ಯಾಕ್ಟರಿಯ 'ಉಚಿತ ಶಾಪಿಂಗ್ ವೀಕ್'!
ಇದೇ ಸಂದರ್ಭದಲ್ಲಿ ಮಾತನಾಡಿದ ಡಾ. ಶಿವಕುಮಾರ್ ಉಪ್ಪಳ, ಭಾರತದಲ್ಲಿ ಮಹಿಳೆಯರನ್ನು ಗರ್ಭಾಶಯ ಕ್ಯಾನ್ಸರ್ ಗಂಭೀರವಾಗಿ ಕಾಡುತ್ತಿದೆ. ಇದನ್ನು ತಡೆಗಟ್ಟಲು ಮುಂಚಿವಾಗಿಯೇ ತಪಾಸಣೆ ಮಾಡಿಸುವುದು ಹಾಗೂ ಎಚ್‌ಪಿವಿ (HPV) ಲಸಿಕೆ ಹಾಕಿಸುವ ಮೂಲಕ ಸಾಧ್ಯವಾಗುತ್ತದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 7892269215 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.