SSLC Preparatory Exam 2: ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2; ವೇಳಾಪಟ್ಟಿ ಪ್ರಕಟ
ರಾಜ್ಯದಲ್ಲಿ ಜನವರಿ 27ರಿಂದ ಫೆಬ್ರವರಿ2ರವರೆಗೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಇದಕ್ಕೆ ಸಂಬಂಧಿಸಿ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3 ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪೂರ್ವ ಸಿದ್ಧತಾ ಪರೀಕ್ಷೆ-1 ಜನವರಿ 5ರಿಂದ 10ರವರೆಗೆ ನಡೆದಿತ್ತು.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ವೇಳಾಪಟ್ಟಿಯಂತೆ ಜನವರಿ 27ರಿಂದ ಫೆಬ್ರವರಿ2ರವರೆಗೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು (ಪ್ರೌಢಶಿಕ್ಷಣ) ಪ್ರಕಟಣೆ ಹೊರಡಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿ
- ಜನವರಿ 27, ಮಂಗಳವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
- ಜನವರಿ 28, ಬುಧವಾರ: ಕೋರ್ ಸಬ್ಜೆಕ್ಟ್: ಗಣಿತ
- ಜನವರಿ 29, ಗುರುವಾರ: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
- ಜನವರಿ 30, ಶುಕ್ರವಾರ: ತೃತೀಯ ಭಾಷೆ: ಹಿಂದಿ (NCERT, ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ
- ಜನವರಿ 31, ಶನಿವಾರ: ಕೋರ್ ಸಬ್ಜೆಕ್ಟ್: ವಿಜ್ಞಾನ
- ಫೆಬ್ರವರಿ 2, ಸೋಮವಾರ: ಕೋರ್ ಸಬ್ಜೆಕ್ಟ್: ಸಮಾಜ ವಿಜ್ಞಾನ
(ಎಲ್ಲಾ ವಿಷಯಗಳ ಪರೀಕ್ಷೆ ಬೆಳಗ್ಗೆ 10:30ರಿಂದ 1.45 ಗಂಟೆವರೆಗೆ ನಡೆಯಲಿವೆ)
ವಿಶೇಷ ಸೂಚನೆ: ಜೆಟಿಎಸ್ (51, 52, 54), ಪರ್ಯಾಯ ವಿಷಯಗಳು (95, 96, 97, 28, 29), ಎನ್‌ಎಸ್‌ಕ್ಯೂಎಫ್ (86, 87, 88, 90, 21, 22) ಮತ್ತು ತೃತೀಯ ಭಾಷೆ ಮರಾಠಿ (70M) ವಿಷಯಗಳ ಪೂರ್ವಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲಿಯೇ ಸಂಬಂಧಿಸಿದ ವಿಷಯ ಶಿಕ್ಷಕರಿಂದ ಪ್ರಶ್ನೆಪತ್ರಿಕೆ ತಯಾರಿಸಿಕೊಂಡು ಪರೀಕ್ಷೆಯನ್ನು ನಡೆಸಲು ಶಾಲಾ ಮುಖ್ಯ ಶಿಕ್ಷಕರು ಕ್ರಮ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
Cabinet Meeting: ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ
3 ಪೂರ್ವಸಿದ್ಧತಾ ಪರೀಕ್ಷೆ
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3 ಪೂರ್ವಸಿದ್ಧತಾ ಪರೀಕ್ಷೆಗಳು ನಿಗದಿಯಾಗಿವೆ. ಪೂರ್ವ ಸಿದ್ಧತಾ ಪರೀಕ್ಷೆ-1 ಜನವರಿ 5ರಿಂದ 10ರವರೆಗೆ ನಡೆದಿತ್ತು. ಇದೀಗ ಪೂರ್ವ ಸಿದ್ಧತಾ ಪರೀಕ್ಷೆ-2 ಜನವರಿ 27ರಿಂದ ಫೆಬ್ರವರಿ2ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-3 ಫೆಬ್ರವರಿ 23ರಿಂದ 28ರವರೆಗೆ ನಡೆಯಲಿದೆ.