ಮಹಿಳೆಯ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ; ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಅರೆಸ್ಟ್
ಬೆಂಗಳೂರಿನ ಗಾಂಧಿನಗರದಲ್ಲಿರುವ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುವಾಗ ಮಹಿಳೆಗೆ ರಿಜಿಸ್ಟ್ರಾರ್ ಡಾ.ಮಲ್ಲು ಲೈಂಗಿಕ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ತಬ್ಬಿಕೊಂಡು ಮುತ್ತು ಕೊಡಲು ಹಾಗೂ ಬಲವಂತವಾಗಿ ಕಾರು ಹತ್ತಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಡಾ.ಮಲ್ಲು. -
ಬೆಂಗಳೂರು: ಕಚೇರಿಯ ಮಹಿಳಾ ಸಿಬ್ಬಂದಿಯನ್ನು ತಬ್ಬಿಕೊಂಡು ಮುತ್ತು ಕೊಟ್ಟು, ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ನನ್ನು ಅರೆಸ್ಟ್ ಮಾಡಲಾಗಿದೆ. ನೊಂದ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಯಲ್ಲಿ ರಿಜಿಸ್ಟ್ರಾರ್ ಡಾ.ಮಲ್ಲು ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಿಜಿಸ್ಟ್ರಾರ್ ಬಂಧನವಾಗಿದೆ.
ಗಾಂಧಿನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುವಾಗ ಮಹಿಳೆಗೆ ಡಾ.ಮಲ್ಲು ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಅಂಗಾಂಗ ಮುಟ್ಟಿ, ಎಳೆದಾಡಿ ದೌರ್ಜನ್ಯ ಎಸಗಿದ್ದಾರೆ. ಕಾರಿನ ಬಳಿ ಬಲವಂತವಾಗಿ ತಬ್ಬಿಕೊಂಡು ಮುತ್ತು ಕೊಡಲು ಹಾಗೂ ಬಲವಂತವಾಗಿ ಕಾರು ಹತ್ತಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನನ್ವಯ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ರಿಜಿಸ್ಟ್ರಾರ್‌ನನ್ನು ಬಂಧಿಸಿದ್ದಾರೆ.
ಶೂಟಿಂಗ್ ಸೆಟ್‌ನಲ್ಲಿ ಯುವ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ನಿರ್ದೇಶಕ ರಂಜಿತ್ ಬಂಧನ!
ಕರ್ತವ್ಯ ಲೋಪ; ಮುನಿರಾಬಾದ್ ಪಿಎಸ್‌ಐ ಅಮಾನತು
ಕೊಪ್ಪಳ: ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ಕೆಲಸ ನಿರ್ವಹಣೆ ಮಾಡದ್ದಕ್ಕೆ ಮುನಿರಾಬಾದ್ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ. ಎಸ್ಪಿ ರಾಮ್ ಅರಸಿದ್ಧಿ ಅವರು ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸುನೀಲ್ ಮುನಿರಾಬಾದ್ ಠಾಣೆಯ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಮುನಿರಾಬಾದ್ ಠಾಣೆ ವ್ಯಾಪ್ತಿಯಲ್ಲಿ ಕೆಲ ಅನಧಿಕೃತ ಚಟುವಟಿಕೆಗಳು ನಡೆದಿದ್ದವು. ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ, ಅನ್ನಭಾಗ್ಯ ಅಕ್ಕಿ ಮಾರಾಟದಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮುನಿರಾಬಾದ್ ಪಿಎಸ್‌ಐ ಸುನೀಲ್ ಅವರು ಅಮಾನತುಗೊಂಡಿದ್ದಾರೆ.