Karnataka Weather: ಹವಾಮಾನ ವರದಿ; ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಒಣ ಹವೆ ಮುಂದುವರಿದಿದೆ. ಆದರೆ, ನ.19ರಂದು ದಕ್ಷಿಣ ಕನ್ನಡ, ಉಡುಪಿ ಸೇರಿ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿ ನೀಡಲಾಗಿದೆ.
ಮಳೆ (ಸಾಂದರ್ಭಿಕ ಚಿತ್ರ) -
ಬೆಂಗಳೂರು, ನ.18: ರಾಜ್ಯಾದ್ಯಂತ ಮಂಗಳವಾರ ಒಣ ಹವಾಮಾನ ಕಂಡುಬಂದಿದೆ. ಇನ್ನು ನ.19ರಂದು ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ನ.20ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ನ.21ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ನ.22ರಂದು ಕರಾವಳಿಯಲ್ಲಿ ಒಣ ಹವೆ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಮತ್ತು ಗದಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಬಳ್ಳಾರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Monsoon Nail Art 2025: ಈ ಸೀಸನ್‌ನಲ್ಲಿ ಟ್ರೆಂಡಿಯಾದ ಮಾನ್ಸೂನ್ ನೇಲ್ ಆರ್ಟ್‌ಗಳಿವು!
ನ.23ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಮತ್ತು ಗದಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಬಳ್ಳಾರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.