ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

KAS Prelims Exam 2026: ನಾಳೆ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆ ನೇಮಕಾತಿಯ ಪೂರ್ವಭಾವಿ ಪರೀಕ್ಷೆ; ವಸ್ತ್ರಸಂಹಿತೆ, ಮಾರ್ಗಸೂಚಿ ಇಲ್ಲಿದೆ

ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಅಭ್ಯರ್ಥಿಗಳ ಕಡ್ಡಾಯ ತಪಾಸಣೆ ನಡೆಯುತ್ತದೆ. ಮಾನ್ಯ ಗುರುತಿನ ಚೀಟಿ ಕೊಂಡೊಯ್ಯುವುದು ಕಡ್ಡಾಯ. ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಉಪಕೇಂದ್ರದ ಬಳಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕೆಪಿಎಸ್‌ಸಿ ತಿಳಿಸಿದೆ.

ನಾಳೆ 319 ಕೆಎಎಸ್‌ ಅಧಿಕಾರಿ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ

-

Prabhakara R
Prabhakara R Nov 14, 2026 4:58 PM

ಬೆಂಗಳೂರು: ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಾಳೆ (ನ.15) ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ (KAS Prelims Exam 2026) ನಡೆಸಲಾಗುತ್ತಿದೆ. ಪರೀಕ್ಷೆಯನ್ನು ಚುನಾವಣೆ ಮಾದರಿಯಲ್ಲೇ ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಸಿಎಂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೆಪಿಎಸ್‌ಸಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಚುನಾವಣೆ ಮಾದರಿಯಲ್ಲಿ ತರಬೇತಿ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಆ ಸೂಚನೆಯನ್ನು ಅನುಸರಿಸಿ ಕೆಪಿಎಸ್‌ಸಿ ಎಚ್ಚರಿಕೆಯಿಂದ ಕ್ರಮ ಕೈಗೊಂಡಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.

ಕೆಎಎಸ್‌ ಪರೀಕ್ಷೆ ವೇಳಾಪಟ್ಟಿ (ನವೆಂಬರ್‌ 15)

  • ಪತ್ರಿಕೆ-1: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ
  • ಪತ್ರಿಕೆ-2: ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ

ಅಭ್ಯರ್ಥಿಗಳಿಗೆ ಮಾರ್ಗಸೂಚಿ:

  1. ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿರುವ ಸಮಯ:-ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಉಪಕೇಂದ್ರದ ಬಳಿ ಕಡ್ಡಾಯವಾಗಿ ಹಾಜರಿರತಕ್ಕದ್ದು.
  2. ಅಭ್ಯರ್ಥಿಯು ಪರಿಶೀಲನೆಗೆ ಕೊನೆಯ ಕ್ಷಣದಲ್ಲಿ ಆಗಮಿಸುವುದರಿಂದ ಉಂಟಾಗುವ ಗೊಂದಲಗಳಿಗೆ ಅಭ್ಯರ್ಥಿಯೇ ಹೊಣೆಗಾರನಾಗಿರುತ್ತಾರೆ. ನಿಗದಿತ ಸಮಯದೊಳಗೆ ಪರಿಶೀಲನೆಗೊಳಪಡದ ಹಾಗೂ ತಡವಾಗಿ ಆಗಮಿಸುವ ಅಭ್ಯರ್ಥಿಗಳಿಗೆ ಪರೀಕ್ಷಾ ಉಪಕೇಂದ್ರಕ್ಕೆ ಪ್ರವೇಶವನ್ನು ನಿರಾಕರಿಸಲಾಗುವುದು.
  3. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ.
  4. Metal Water Bottles or Non Transparent Water Bottle ಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ Filter ಇರುವ ಫೇಸ್ ಮಾಸ್ಕ್ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
  5. ಅಭ್ಯರ್ಥಿಗಳು ಮೊಬೈಲ್ / ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್ ಡ್ರೈವ್, ಬ್ಲೂ ಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಅವರ ಬಳಿಯಲ್ಲಿಟ್ಟುಕೊಂಡಿಲ್ಲದಿರುವ ಬಗ್ಗೆ ಮತ್ತು ಮೈಯಲ್ಲಿ ಧರಿಸದಿರುವ ಬಗ್ಗೆ ಪರಿಶೀಲನೆಗೆ ಒಳಪಡಿಸಲಾಗುವುದು.
  6. ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿರುವ ಅಭ್ಯರ್ಥಿಗಳು ಹಾಗೂ Hearing aid ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕಾಗಿರುತ್ತದೆ.
  7. ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು (ಆಧಾರ್‌, ಪ್ಯಾನ್‌, ವೋಟರ್‌ ಐಡಿ, ಡಿಎಲ್‌) ಹಾಜರುಪಡಿಸಬೇಕು, ಇಲ್ಲದಿದ್ದರೆ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ. (ನಕಲು ಪತಿ ಅಥವಾ ಸ್ಕ್ಯಾನ್ ಮಾಡಿರುವ ಪ್ರತಿಯನ್ನು ಅನುಮತಿಸಲಾಗುವುದಿಲ್ಲ).
  8. ಪ್ರವೇಶ ಪತ್ರದ ಜತೆಗೆ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ಮಾತ್ರ ತರತಕ್ಕದ್ದು.
  9. ವಸ್ತ್ರಸಂಹಿತೆ (Dress Code):

ಅ) ತುಂಬು ತೋಳಿನ ಶರ್ಟ್/T.Shirt/Frills/ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.

ಆ) ಯಾವುದೇ ರೀತಿಯ ಆಭರಣಗಳನ್ನು (Metal and Non metal) ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)

ಇ) ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.