ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

KCET 2026 Admit Card: ಸಿಇಟಿ 2026 ಪ್ರವೇಶ ಪತ್ರ ಬಿಡುಗಡೆ; ಡೌನ್‌ಲೋಡ್‌ ಮಾಡುವ ವಿಧಾನ ಇಲ್ಲಿದೆ

Karnataka Common Entrance Test: ಸಿಇಟಿಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಎಂಜಿನಿಯರಿಂಗ್ ಸೇರಿ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) (KCET 2026 Admit Card) ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪತ್ರ (Admission Ticket) ಬಿಡುಗಡೆ ಮಾಡಿದೆ.

ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಪ್ರವೇಶ ಪತ್ರದ ಜತೆಗೆ ಅಭ್ಯರ್ಥಿಗಳಿಗೆ ನೀಡಲಾಗುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ಮಾರ್ಗದರ್ಶನಗಳನ್ನು/ಕಾರ್ಯವಿಧಾನಗಳನ್ನು ತಪ್ಪದೇ ಅನುಸರಿಸಲು ಸೂಚಿಸಲಾಗಿದೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಿಇಟಿ ಪ್ರವೇಶ ಪತ್ರ ಡೌನ್‌ಲೋಡ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ. KEA Common Online Application 2026 https://share.google/sR5T9hwr0ft9kB4Zr

ಸಿಇಟಿ ಪ್ರವೇಶ ಪತ್ರ ಡೌನ್‌ ಮಾಡುವುದು ಹೇಗೆ?

  1. ಸಿಇಟಿ-2026ಕ್ಕೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ https://cetonline.karnataka.gov.in/kea/ ಭೇಟಿ ನೀಡಿ, ನಿಗದಿತ ಲಿಂಕ್‌ ಅನ್ನು ಆಯ್ಕೆ ಮಾಡಿ, ಪಾಸವರ್ಡ್ (ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ದಾಖಲಿಸಿದ್ದ) ಮತ್ತು CAPTCHA ಅನ್ನು ನಮೂದಿಸಬೇಕು.
  2. ಅಭ್ಯರ್ಥಿಯ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಓಟಿಪಿ ನಮೂದಿಸಿದ ನಂತರ ಲಾಗಿನ್ ಮಾಡಬೇಕು ಹಾಗೂ ಅಭ್ಯರ್ಥಿಯ ಅರ್ಹತಾ ಪರೀಕ್ಷೆಯ ಈ ಕೆಳಕಂಡ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು.

ಎ. 2ನೇ ಪಿಯು / 12ನೇ ತರಗತಿಯ ಬೋರ್ಡ್
ಬಿ. ನೋಂದಣಿ ಸಂಖ್ಯೆ / ರೋಲ್ ನಂಬರ್
ಸಿ. ತೇರ್ಗಡೆಯಾದ ವರ್ಷ

ಈ ಮೇಲಿನ ವಿವರಗಳನ್ನು ದಾಖಲಿಸಿದ ನಂತರ ನಂತರ ಸಿಇಟಿ-2026 ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.