ಬೆಂಗಳೂರು: 2026 ನೇ ಸಾಲಿನ ಯುಜಿಸಿಟಿ ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಿದೆ. ಸಚಿವ ಡಾ.ಶರಣಪ್ರಕಾಶ ಪಾಟೀಲ (Sharan Prakash Patil) ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳು (UGCET Result) ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಲು ಅವಕಾಶ ದೊರೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಈ ಪರೀಕ್ಷೆಯಲ್ಲಿ ಈ ಬಾರಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಂಜಿನಿಯರಿಂಗ್, ಫಾರ್ಮಸಿ, ಕೃಷಿ, ವೆಟರಿನರಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಿಇಟಿ ರ‍್ಯಾಂಕ್ ಅತ್ಯಂತ ಮಹತ್ವದ್ದಾಗಿದೆ.
ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಆರ್‌ವಿ ಪಿಯು ಕಾಲೇಜಿನ (RV College) ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಸೃಜನ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದರೆ, ನಿನಾದ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಪಶುವೈದ್ಯಕೀಯ (ವೆಟರ್ನರಿ) ವಿಭಾಗದಲ್ಲಿ ನಯನಾ ಗೋಪಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇನ್ನುಳಿದ ಫಲಿತಾಂಶಗಳು ತಿಳಿದು ಬರಬೇಕಾಗಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
ಮೊದಲು ಮೇಲೆ ನೀಡಲಾದ ಯಾವುದೇ ಒಂದು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣಿಸುವ “UGCET 2026 Result” ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆ (Registration Number) ನಮೂದಿಸಿ.
ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು (Capital Letters) ಟೈಪ್ ಮಾಡಿ.
ಕೊನೆಯದಾಗಿ ‘Submit’ ಬಟನ್ ಒತ್ತಿ. ಈಗ ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಕಾಣುತ್ತದೆ.
ಫಲಿತಾಂಶ ಪ್ರಕಟವಾದ ತಕ್ಷಣವೇ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಸೀಟ್ ಹಂಚಿಕೆ, ದಾಖಲೆ ಪರಿಶೀಲನೆ ಹಾಗೂ ಕಾಲೇಜು ಆಯ್ಕೆ ಪ್ರಕ್ರಿಯೆಗಳ ಬಗ್ಗೆ ಕೆಇಎ ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ.