ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

KEA Recruitment Exam: ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

KEA Exam Answer Key released: ರಾಜ್ಯದ ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್‌ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.12: ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಖಾಲಿ ಹುದ್ದೆಗಳ ನೇಮಕಾತಿಗೆ (Non-HK) ಜನವರಿ 10 ಮತ್ತು 11ರಂದು ನಡೆಸಿದ ಪರೀಕ್ಷೆಗಳ (KEA Recruitment Exam) ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಪಡೆಯಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್‌ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಕೀ ಉತ್ತರಗಳ ಬಗ್ಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ಜನವರಿ 14ರಂದು ಬೆಳಗ್ಗೆ 11 ಗಂಟೆ ಒಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬೇಕು. ಬಳಿಕ ಪರಿಶೀಲಿಸಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕೀ ಉತ್ತರ ಪಡೆಯುವುದು ಹೇಗೆ?

  • ಕೆಇಎ(KEA) ವೆಬ್‌ಸೈಟ್‌ಗೆ ಭೇಟಿ ನೀಡಿ
  • ಮುಖಪುಟದಲ್ಲಿ ನೇಮಕಾತಿ ಕೆಟಗರಿ ಮೇಲೆ ಕ್ಲಿಕ್‌ ಮಾಡಿ.
  • ನಂತರ ವಿವಿಧ ಇಲಾಖೆಗಳ ನೇಮಕಾತಿ (Non-HK) ಆಯ್ಕೆ ಒತ್ತಿ.
  • ಕೀ ಉತ್ತರ ಲಿಂಕ್‌ ಮೇಲೆ ಕ್ಲಿಕ್ಕಿಸಿದರೆ, ಪಿಡಿಎಫ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಕೀ ಉತ್ತರಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ

Federal Bank Recruitment 2026: ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದವರಿಗೆ ಗುಡ್‌ನ್ಯೂಸ್‌; ಫೆಡರಲ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ

ಕೆಎಸ್‌ಡಿಎಲ್, ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ವಿವಿಧ ಇಲಾಖೆ/ನಿಗಮ ಮಂಡಳಿಗಳ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಸಂಬಂಧ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

2025ರ ನ.19 ರಂದು ಪ್ರಕಟಿಸಿದ ವೇಳಾಪಟ್ಟಿಯಲ್ಲಿ, ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗಳಿಗೆ ಜ. 10 ಮತ್ತು ಕಿರಿಯ ಅಧಿಕಾರಿ (ಉತ್ಪಾದನೆ & ನಿರ್ವಹಣೆ) ಮತ್ತು ಕಿರಿಯ ಅಧಿಕಾರಿ (ಸಾಮಾಗ್ರಿ & ಉಗ್ರಾಣ) ಹುದ್ದೆಗಳಿಗೆ ಜ.12 ರಂದು ಪರೀಕ್ಷೆ ನಡೆಸಲಾಗುವುದೆಂದು ತಿಳಿಸಲಾಗಿತ್ತು. ನಂತರ ಕೆ.ಎಸ್.ಡಿ.ಎಲ್ ಸಂಸ್ಥೆಯ ಕಿರಿಯ ಅಧಿಕಾರಿ (ಸಾಮಾಗ್ರಿ & ಉಗ್ರಾಣ) ಹುದ್ದೆ ಪರೀಕ್ಷೆಯನ್ನು ಜ.18ಕ್ಕೆ ಮುಂದೂಡಿತ್ತು. ಆದರೆ ತಾಂತ್ರಿಕ ಕಾರಣದಿಂದ ಈ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಉಳಿದಂತೆ ಜ.19ರ ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಇಎ ತಿಳಿಸಿದೆ.

KEA Exam (1)

ಪರಿಷ್ಕೃತ ವೇಳಾಪಟ್ಟಿಯಂತೆ ಕೆಎಸ್‌ಡಿಎಲ್‌ ಕಿರಿಯ ಅಧಿಕಾರಿ (ಸಾಮಗ್ರಿ & ಉಗ್ರಾಣ) ಹುದ್ದೆಗಳಿಗೆ ನಿರ್ದಿಷ್ಟ ಪತ್ರಿಕೆ -2ರ ಪರೀಕ್ಷೆ ಜ.17ರಂದು ನಡೆಯಲಿದೆ. ಅದೇ ರೀತಿ ಕೆಎಸ್‌ಡಿಎಲ್‌ ಕಿರಿಯ ಅಧಿಕಾರಿ (ಉತ್ಪಾದನೆ ಮತ್ತು ನಿರ್ವಹಣೆ) ಮತ್ತು ಕೃಷಿ ಮಾರಾಟ ಇಲಾಖೆಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗಳಿಗೆ ನಿರ್ದಿಷ್ಟ ಪತ್ರಿಕೆ -2ರ ಪರೀಕ್ಷೆ ಜ. 18ರಂದು ನಡೆಯಲಿದೆ.